ಬಾಲಮಂದಿರ ಮಕ್ಕಳಿಗೆ ಕ್ರೀಡಾ ಸಾಮಗ್ರಿ ವಿತರಣೆ

CTD NEWS CEO----
Published on

ಚಿತ್ರದುರ್ಗ: ನಗರದ ಸರ್ಕಾರಿ ಬಾಲ ಮಂದಿರದ ಮಕ್ಕಳಿಗೆ ಸೋಮವಾರ ಜಿಪಂ ಸಿಇಒ ಎಸ್.ಜೆ. ಸೋಮಶೇಖರ್ ತಮ್ಮ ಸ್ವಂತ ಹಣದಲ್ಲಿ ಕ್ರೀಡಾ ಸಾಮಗ್ರಿ ವಿತರಿಸಿದರು.

ಈಚೆಗೆ ನಗರದ ಸರ್ಕಾರಿ ಬಾಲಕರ ಬಾಲ ಮಂದಿರ ಮತ್ತು ಸರ್ಕಾರಿ ಬಾಲಕಿಯರ ಬಾಲಮಂದಿರಗಳಿಗೆ ಸಿಇಒ ಭೇಟಿ ನೀಡಿದ್ದ ವೇಳೆ ಮಕ್ಕಳು ವಿವಿಧ ಕ್ರೀಡಾ ಸಾಮಗ್ರಿಗಳು ಬೇಕೆಂದು ಕೇಳಿದಾಗ ಒದಗಿಸುವುದಾಗಿ ಭರವಸೆ ಕೊಟ್ಟಿದ್ದರು.

ಅದರಂತೆ ಕ್ರೀಡಾ ಸಾಮಗ್ರಿ ಮತ್ತು ಆಟಿಕೆಗಳನ್ನು ಸಿಇಒ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಭಾರತಿ ಆರ್. ಬಣಕಾರ್, ಜಿಲ್ಲಾ ಮಕ್ಕಳ ಶಿಕ್ಷಣಾಧಿಕಾರಿ ಸಿ. ಸವಿತಾ ಹಾಗೂ ಬಾಲ ಮಂದಿರಗಳ ಸಿಬ್ಬಂದಿಗೆ ಹಸ್ತಾಂತರಿಸಿದರು.

ಜಿಪಂ ಉಪ ಕಾರ್ಯದರ್ಶಿ ಕೆ. ತಿಮ್ಮಪ್ಪ, ಡಿವೈಎಸ್‌ಪಿ ಪಿ.ಕೆ.ದಿನಕರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಸರ್ಕಾರಿ ಬಾಲ ಮಂದಿರದ ಅಧೀಕ್ಷಕರಾದ ಜಿ.ವಿ. ಸಂತೋಷ್, ಜ್ಯೋತಿ, ಕಾವೇರಮ್ಮ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net