ಬಾಲಾಪರಾಧಿ ಮನಸ್ಸು ಬದಲಿಸಲು ಕಾನೂನಿನಲ್ಲಿದೆ ಅವಕಾಶ

25_11_Mdy_Dattu Masacharane
Published on

ಮಂಡ್ಯ: ಬಾಲಾಪರಾಧಿಗಳು ಮನಸ್ಸನ್ನು ಮನಪರಿವರ್ತನೆ ಮಾಡುವುದು ಬಾಲನ್ಯಾಯ ಮಂಡಳಿ ಕಾಯ್ದೆಯ ನಿಯಮವಾಗಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಎನ್.ಡಿ.ಮಾಲಾ ತಿಳಿಸಿದರು.
ತಾಲೂಕಿನ ಹೊಡಾಘಟ್ಟ ಗ್ರಾಮ ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹೊಡಾಘಟ್ಟ ಗ್ರಾಪಂ ಸಹಯೋಗದಲ್ಲಿ ಮಹಿಳಾ ದಿನ ಮತ್ತು ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಆಯೋಜಿಸಿದ್ದ ಬಾಲನ್ಯಾಯ ಕಾಯ್ದೆ 2015 ಮತ್ತು ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
18 ವರ್ಷದೊಳಗಿರುವವರು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರೆ ಅಂತಹವರನ್ನು ಬಾಲಾಪರಾಧಿಗಳೆಂದು ಪರಿಗಣಿಸಲಾಗುತ್ತದೆ. ಅವರನ್ನು ನೋಡಿಕೊಳ್ಳಲು ಪೊಲೀಸ್ ಠಾಣೆಗಳಲ್ಲಿ ವಿಶೇಷ ಘಟಕ ಸ್ಥಾಪಿಸಿ ವಿಶೇಷ ಸಂರಕ್ಷಣಾಧಿಕಾರಿಯನ್ನಾಗಿ ನೇಮಿಸಲಾಗಿದೆ. ಅವರೇ ಬಾಲಪರಾಧಿಗಳನ್ನು ಮಾತನಾಡಿಸಬೇಕು. ಆ ವೇಳೆ ಅಧಿಕಾರಿ ಸಮವಸ್ತ್ರ ಧರಿಸಿರಬಾರದು. ಜತೆಗೆ ವಾತಾವರಣದಲ್ಲಿ ಭಯ ಉಂಟು ಮಾಡಬಾರದು ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ರಾಜಮೂರ್ತಿ, ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ವರದರಾಜು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎ.ಎಂ.ಬಸವರಾಜು, ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ವಿಜಯಪ್ರಸಾದ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಯೋಗೇಶ್, ಮಕ್ಕಳ ತಜ್ಞ ಡಾ.ಶಿವಪ್ರಸಾದ್, ಹೊಡಾಘಟ್ಟ ಗ್ರಾಪಂ ಆಡಳಿತಾಧಿಕಾರಿ ಡಾ.ಚಂದ್ರಶೇಖರ್, ವಿಕಸನ ಸಂಸ್ಥೆ ನಿರ್ದೇಶಕ ಮಹೇಶ್‌ಚಂದ್ರಗುರು, ಬಡ್ಸ್ ಸಂಸ್ಥೆ ವೆಂಕಟೇಶ್, ಮಕ್ಕಳ ರಕ್ಷಣಾಧಿಕಾರಿ ರಾಜೇಂದ್ರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net