ಬಾಲ್ ಬ್ಯಾಡ್ಮಿಂಟನ್‌ನಲ್ಲಿ ಪ್ರಥಮ ಸ್ಥಾನ

10HSN1
Published on

ಹಾಸನ: ಮಂಡ್ಯ ಜಿಲ್ಲೆಯ ಭಾರತೀ ನಗರದ ಭಾರತೀ ಪದವಿ ಕಾಲೇಜಿನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಮೈಸೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜುಗಳ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಹಾಸನದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದಿದೆ.
ಕಳೆದ ಬಾರಿ ಎರಡನೇ ಸ್ಥಾನ ಪಡೆದುಕೊಂಡಿದ್ದ ತಂಡ ಈ ಬಾರಿ ಪ್ರಥಮ ಬಹುಮಾನ ತನ್ನದಾಗಿಸಿಕೊಂಡಿದೆ. ಎಂ.ಆರ್. ರಾಧಿಕಾ, ಹೇಮಾ, ರಶ್ಮಿ, ಎಸ್.ಎಚ್. ಕಾವ್ಯಾ, ಯಶಸ್ವಿನಿ, ಸಂಗೀತಾ, ಸವಿತಾ, ಮೆಹಕ್ ಸೆಬಾ ಹಾಗೂ ಪ್ರಕೃತಿ ತಂಡದಲ್ಲಿ ಭಾಗವಹಿಸಿದ್ದರು.

ಪ್ರಾಂಶುಪಾಲ ಕೆ. ಗುರುರಾಜ್ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಜಿ.ಪಿ. ಯೋಗೇಶ್ ಕ್ರೀಡಾಪಟುಗಳಿಗೆ ತರಬೇತಿ ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net