ಬಾಲ್ಯ ವಿವಾಹಗಳ ಜಾಗೃತಿ ಮೂಡಿಸಿ

23 YERRISWAMY 04
Published on

ಬಳ್ಳಾರಿ : ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹಗಳು ಹೆಚ್ಚಾಗುತ್ತಿದ್ದು, ಅವುಗಳನ್ನು ತಡೆಯಲು ಹೆಚ್ಚಿನ ರೀತಿಯಲ್ಲಿ ಜಾಗೃತಿ ಮೂಡಿಸಬೇಕು ಎಂದು ಡಾ.ವಿ.ಜೆ. ಶೋಭಾರಾಣಿ ಹೇಳಿದರು.
ನಗರದ ಎಸ್ಪಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ರೀಡ್ಸ್ ಸಂಸ್ಥೆ ಸಹಯೋಗದೊಂದಿಗೆ ಮಂಗಳವಾರ ನಡೆದ ಫೋಕ್ಸೋ ಕಾಯ್ದೆ- 2012 ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ 2006 ಕುರಿತು ಸೇವಾ ನಿರತ ಪೊಲೀಸ್ ಅಧಿಕಾರಿ ಹಾಗೂ ಮಕ್ಕಳ ಕಲ್ಯಾಣ ಪೊಲೀಸ್ ಮತ್ತು ತನಿಖಾ ಸಹಾಯಕ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಬಾಲ್ಯ ವಿವಾಹ ಮತ್ತು ಪೋಕ್ಸೋ ಪ್ರಕರಣಗಳು ಕುರಿತು ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳುವದರ ಮೂಲಕ ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಬಹುದು ಎಂದು ಹೇಳಿದರು.
ಪ್ರಮುಖರಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಉಪನಿರ್ದೇಶಕ ವಿಜಯಕುಮಾರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಲಾಲಪ್ಪ, ಡಿಎಸ್ಪಿಗಳಾದ ಚಂದ್ರಕಾಂತ, ನಂದಾರೆಡ್ಡಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net