ಸಂಡೂರು ತಾಲೂಕಿನ ಜಿಂದಾಲ್ ನ ವಿದ್ಯಾನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಲ್ಯಾಣ ಕರ್ನಾಟಕದ ಭಾಗದಲ್ಲಿ ಬಾಲ್ಯದಿಂದಲೇ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ಈ ನರ್ಸರಿ ಶಾಲೆಗಳನ್ನು ತೆರೆಯಲಾಗಿದೆ. ಅದರಂತೆ, 872 ಬೈ ಲಿಂಗ್ ವೆಲ್ ಹಾಗೂ 306 ಎನ್‌ಎಸ್‌ಕ್ಯೂಎಸ್ ಶಾಲೆಗಳು ಆರಂಭಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳು ಶೈಕ್ಷಣಿಕವಾಗಿ ಹಿಂದುಳಿದಿವೆ. ಈಗಾಗಲೇ ಕಳೆದ ವರ್ಷ ಅಕ್ಷರ ಆವಿಷ್ಕಾರ ಯೋಜನೆ ಆರಂಭಿಸಿದ್ದು, ಹಂತ ಹಂತವಾಗಿ ಪ್ರಗತಿ ಸಾಧಿಸಲಾಗುವುದು. ಕ.ಕ. ಭಾಗದ ಶೇ. 76% ಮೂಲಭೂತ ಸೌಕರ್ಯಗಳ ಕೊರತೆಯಿದ್ದು, ಕೆಲ ವರ್ಷಗಳಲ್ಲಿಯೇ ಸರಿಪಡಿಸಲಾಗುವುದು. ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನಿಭಾಯಿಸಲು ಅತಿಥಿ ಶಿಕ್ಷಕರ ವೇತನಕ್ಕಾಗಿ 18.34 ಕೋಟಿ ರೂ. ಮೀಸಲು ಇಡಲಾಗಿದೆ. ಬಿಹಾರ್, ಜಾರ್ಖಂಡ್ ಹಾಗೂ ವಿವಿಧ ರಾಜ್ಯಗಳಲ್ಲಿ ಹೆಚ್ಚಿನ ಶಿಕ್ಷಕರ ಕೊರತೆಯಿದ್ದು. ಆದರೆ, ಕರ್ನಾಟಕದಲ್ಲಿ 0.43% ಶಿಕ್ಷಕರ ಕೊರತೆಯಿದೆ ಎಂದು ಮಾಹಿತಿ ನೀಡಿದರು. ರಾಜ್ಯದ ಕಲ್ಯಾಣ ಕರ್ನಾಟಕ ವಿಭಾಗದಲ್ಲಿ 19,834 ಶಿಕ್ಷಕರ ಬೇಡಿಕೆಯಿದ್ದು, ಮುಂದಿನ ದಿನಗಳಲ್ಲಿ 6,584 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದರು. ಡಿಸಿ ಪ್ರಶಾಂತಕುಮಾರ ಮಿಶ್ರಾ, ಎಸ್ಪಿ ಡಾ.ವಿ.ಜೆ. ಶೋಭಾರಾಣಿ,ಕಲಬುರಗಿ ಶಿಕ್ಷಣ ಇಲಾಖೆ ಅಪರ ಆಯುಕ್ತ ಡಾ. ಎಸ್. ಆಕಾಶ್ ಇದ್ದರು.