ಬಾಲ್ಯವಿವಾಹ ತಡೆಯುವಲ್ಲಿ ಪಾಲಕರು ಸಹಕರಿಸಿ

Geetha
Published on

ಚಿತ್ರದುರ್ಗ: ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಪಾಲಕರ ಪಾತ್ರ ತುಂಬಾ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹಿಳಾ ಸಬಲೀಕರಣ ಘಟಕದ ಡಿ.ಗೀತಾ ಹೇಳಿದರು.

ಜೆಸಿಆರ್ ಬಡಾವಣೆ ಜನಶಿಕ್ಷಣ ಸಂಸ್ಥೆಯ ಕಾರ್ಯಾಲಯದಲ್ಲಿ ಶನಿವಾರ ನಡೆದ ಕೌಶಲ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಬಾಲ್ಯ ತಾಯಂದಿರ ಸಂಖ್ಯೆ ಹೆಚ್ಚಾಗುತ್ತಿದ್ದು, ಅದನ್ನು ತಡೆಯುವ ನಿಟ್ಟಿನಲ್ಲಿ ಪಾಲಕರು ಮುಂದಾಗಬೇಕಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸುರಕ್ಷಿತ-ಅಸುರಕ್ಷಿತ ಸ್ಪರ್ಶದ ವ್ಯತ್ಯಾಸ ಕುರಿತು ಮಾಹಿತಿ ತಿಳಿಸಿ ಎಂದು ಸಲಹೆ ನೀಡಿದರು.

ಮಹಿಳೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಮಕ್ಕಳ ಸಹಾಯವಾಣಿ 1098, ಮಹಿಳಾ ಸಹಾಯವಾಣಿ 181ಗೆ ಕರೆ ಮಾಡಿ. ಅಂತವರ ಹೆಸರು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದರು.

ಸಂಸ್ಥೆಯ ನಿರ್ದೇಶಕಿ ಜಿ.ಎಂ.ರೇಖಾ, ಕಾರ್ಯಕ್ರಮಾಧಿಕಾರಿ ಭರತ್, ಸಹಾಯಕ ಕಾರ್ಯಕ್ರಮಾಧಿಕಾರಿ ಶೃತಿ, ಕಚೇರಿ ವ್ಯವಸ್ಥಾಪಕ ತಿಪ್ಪೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net