ಬಾಲ್ಯವಿವಾಹದ ವಿರುದ್ಧ ಪೋಕ್ಸೋ,ಅಪರಣ ಪ್ರಕರಣ ದಾಖಲು

CTD JDUGE--------
Published on

ಚಿತ್ರದುರ್ಗ: ಹದಿನೆಂಟು ವರ್ಷದೊಳಗಿನ ಹೆಣ್ಣು ಮಕ್ಕಳನ್ನು ಮದುವೆಯಾದರೆ ಅಂತಹವರ ವಿರುದ್ಧ ಪೋಕ್ಸೋ ಹಾಗೂ ಅಪಹರಣ ಪ್ರಕರಣ ದಾಖಲಿಸುವುದಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ವಿಜಯ್ ಹೇಳಿದರು.

ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಬಾಲಕಿಯರ ಅಪಹರಣ ಸಂಖ್ಯೆ ಅಧಿಕವಾಗಿರುವುದು ಕಳವಳಕಾರಿಯಾಗಿದೆ. ಇಂತಹ ಪ್ರಕರಣಗಳಲ್ಲಿ ಚಿತ್ರದುರ್ಗ ಜಿಲ್ಲೆ 5 ಸ್ಥಾನದಲ್ಲಿರುವುದು ಬೇಸರದ ಸಂಗತಿ. ಶಾಲಾ, ಕಾಲೇಜುಗಳಲ್ಲಿ ಮಹಿಳಾ ಶಿಕ್ಷಕಿ, ಉಪನ್ಯಾಸಕಿಯರು ಬಾಲ್ಯವಿವಾಹ, ಪೋಕ್ಸೋ ಹಾಗೂ ಸಾಮಾಜಿಕ ಪಿಡುಗುಗಳ ಬಗ್ಗೆ ಜಾಗೃತಿ ಮೂಡಿಸಬೇಕಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಚ್. ವಿಜಯಕುಮಾರ್ ಮಾತನಾಡಿ, ಹೆಣ್ಣುಮಕ್ಕಳ ಅಪಹರಣ ಹಾಗೂ ಬಾಲ್ಯವಿವಾಹಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿ ದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ,ಡಿಡಿಪಿಯು ಕೆ. ತಿಮ್ಮಯ್ಯ, ಬಸವೇಶ್ವರ ಆಸ್ಪತ್ರೆಯ ಡಾ. ರಶ್ಮಿ, ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷೆ ಪಿ. ಶೀಲಾ ಮಾತನಾಡಿದರು.

ಹಿರಿಯ ನಾಗರಿಕರ ಸಬಲೀಕರಣ ಹಾಗೂ ಅಂಗವಿಕಲರ ಕಲ್ಯಾಣಾಧಿಕಾರಿ ಜೆ. ವೈಶಾಲಿ, ಟಿಎಚ್‌ಒ ಡಾ.ಬಿ.ವಿ. ಗಿರೀಶ್, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪಿ.ಎ. ಸಣ್ಣಪಾಲಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಜಿಲ್ಲಾ ನಿರೂಪಣಾಧಿಕಾರಿ ಡಿ. ಮಂಜುನಾಥ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಗಂಗಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕೆ. ಪ್ರೇಮಮೂರ್ತಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net