ಬಾಳುಗೋಡು ಗ್ರಾಮದ 500 ಮೀಟರ್ ಸೀಲ್‌ಡೌನ್

25vtp2 seeldown
Published on

ವಿರಾಜಪೇಟೆ: ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳುಗೋಡು ರಸ್ತೆಯ ನಿವಾಸಿ ಮಹಿಳೆಗೆ ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಬಾಳುಗೊಡು ಗ್ರಾಮದ 500 ಮೀಟರ್ ವ್ಯಾಪ್ತಿಯನ್ನು ಸೀಲ್‌ಡೌನ್ ಮಾಡಿದೆ ಎಂದು ತಹಸೀಲ್ದಾರ್ ನಂದೀಶ್ ಮಾಹಿತಿ ನೀಡಿದ್ದಾರೆ.

ತಾಲೂಕು ವೈದ್ಯಾಧಿಕಾರಿ ಡಾ.ಯತಿರಾಜ್ ಅವರ ತಂಡ ಸೋಂಕಿತರ ಪ್ರಾಥಮಿಕ ಸಂಪರ್ಕ ಇರುವ ವ್ಯಕ್ತಿಗಳ ಗಂಟಲು ದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದೆ. ಕಳೆದ ವಾರ ಸೋಂಕಿತ ಮಹಿಳೆಯ ಸಂಬಂಧಿ ಬಿಟ್ಟಂಗಾಲ ಗ್ರಾಮ ಪಂಚಾಯಿತಿಗೆ ಆಗಮಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸಭೆಯಲ್ಲಿ ಹಾಜರಾದ ಸದಸ್ಯರ ಗಂಟಲು ದ್ರವ ಸಂಗ್ರಹಿಸಲಾಗಿದೆ. ಸೋಂಕಿತರ ಮನೆಗೆ ಯಾರೆಲ್ಲ ಹೋಗಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಎಲ್ಲರ ಗಂಟಲು ದ್ರವ ಸಂಗ್ರಹಿಸಿ ಅಗತ್ಯ ಇದ್ದಲ್ಲಿ ಕ್ವಾರಂಟೈನ್ ಮಾಡಲಾಗುವುದು. 500 ಮೀಟರ್ ಗ್ರಾಮವನ್ನು ಸೀಲ್‌ಡೌನ್ ಮಾಡಿರುವುದರಿಂದ ತಾಲೂಕು ಆಡಳಿತದಿಂದಲೇ ದೈನಂದಿನ ಆಹಾರದ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net