ಬಾಳೆಹೊನ್ನೂರಿನಲ್ಲಿ ಸಂಭ್ರಮದ ನಾಗರ ಪಂಚಮಿ

nagabana
ಬಾಳೆಹೊನ್ನೂರಿನ ಮಾರ್ಕಾಂಡೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿ ಅಂಗವಾಗಿ ವಿಶೇಷವಾಗಿ ಪುಷ್ಪಾಲಂಕಾರ ನೆರವೇರಿಸಿ ಪೂಜೆ ಸಲ್ಲಿಸಲಾಯಿತು.
Published on

ಬಾಳೆಹೊನ್ನೂರು: ಹೋಬಳಿಯಾದ್ಯಂತ ನಾಗರ ಪಂಚಮಿಯನ್ನು ಸೋಮವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ನಾರಿಯರು ನಾಗ ಬನಕ್ಕೆ ತೆರಳಿ ತನಿ ಎರೆದು, ಅರಶಿನ ಹಚ್ಚಿ ವಿಶೇಷ ಪೂಜೆ ಸಲ್ಲಿಸಿದರು. ಪಟ್ಟಣದ ಸುತ್ತಮುತ್ತಲಿನ ಎಲ್ಲಾ ದೇವಾಲಯಗಳ ನಾಗರ ಕಟ್ಟೆಗಳಲ್ಲಿ ನಡೆದ ವಿಶೇಷ ಪೂಜೆಯಲ್ಲಿ ನೂರಾರು ಭಕ್ತರು ಭಾಗವಹಿಸಿ ಪೂಜೆ ಸಲ್ಲಿಸಿದರು.
ನಾಗಬನದ ನಾಗರ ಕಲ್ಲಿಗೆ ವಿಶೇಷ ಅಭಿಷೇಕ, ಪೂಜೆಗಳು ವಿಜೃಂಭಣೆಯಿಂದ ನಡೆದವು. ಪಟ್ಟಣದ ಮಾರ್ಕಾಂಡೇಶ್ವರ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಕೆ.ಎಸ್.ಪ್ರಕಾಶ್‌ಭಟ್ ನೇತೃತ್ವದಲ್ಲಿ ಹತ್ತಕ್ಕೂ ಹೆಚ್ಚು ಅರ್ಚಕರು ನಾಗದೇವರಿಗೆ ಪಂಚಾಮೃತಾಭಿಷೇಕ, ಪುಷ್ಪಾಲಂಕಾರ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ನಡೆಸಿದರು.
ಪಟ್ಟಣದ ಬಂಡಿಮಠ ಬಾಲಸುಬ್ರಹ್ಮಣ್ಯ ದೇವಸ್ಥಾನ, ಗಣಪತಿ ದೇವಸ್ಥಾನ, ನಾಗರಕಟ್ಟೆ, ರಂಭಾಪುರಿ ಪೀಠ, ರೇಣುಕಾನಗರದ ಗಣಪತಿ ದೇವಸ್ಥಾನ, ಅಕ್ಷರನಗರ ಗುರಿಕಟ್ಟೆಬೈಲು ಚಾಮುಂಡೇಶ್ವರಿ ದೇಗುಲದ ನಾಗಬನದಲ್ಲಿ ವಿಶೇಷ ಧಾರ್ಮಿಕ ಕೈಂಕರ್ಯಗಳು ನಡೆದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net