ಬಾಳೆಹೊನ್ನೂರು ಪಿಎಸಿಎಸ್‌ಗೆ ಕೆ.ಕೆ.ವೆಂಕಟೇಶ್ ಅಧ್ಯಕ್ಷ

b hr pacs
ಬಾಳೆಹೊನ್ನೂರು ಪಿಎಸಿಎಸ್ ಅಧ್ಯಕ್ಷ ಕೆ.ಕೆ.ವೆಂಕಟೇಶ್, ಉಪಾಧ್ಯಕ್ಷೆ ಕೋಕಿಲಮ್ಮ ಅವರನ್ನು ನಿರ್ದೇಶಕರು ಅಭಿನಂದಿಸಿದರು. ಕೆ.ಟಿ.ವೆಂಕಟೇಶ್, ಎಂ.ಎಸ್.ಅರುಣೇಶ್, ಆಶಾ ಇತರರಿದ್ದರು.
Published on

ಬಾಳೆಹೊನ್ನೂರು: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಕೆ.ವೆಂಕಟೇಶ್ ಕಾಂಗ್ರೆಸ್ ಬೆಂಬಲದೊಂದಿಗೆ ಒಂದು ಮತದ ಅಂತರದಿಂದ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಕೋಕಿಲಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗುರುವಾರ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಟಿ.ಎಂ.ಉಮೇಶ್ ಕಲ್ಮಕ್ಕಿ, ಬಂಡಾಯ ಅಭ್ಯರ್ಥಿಯಾಗಿ ಕೆ.ಕೆ.ವೆಂಕಟೇಶ್ ನಾಮಪತ್ರ ಸಲ್ಲಿಸಿದರು. ಚುನಾವಣೆಯಲ್ಲಿ ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಎಂ.ಡಿ.ರಾಜೇಶ್ ಸಹ ಮತ ಚಲಾಯಿಸಿದ್ದು, ಟಿ.ಎಂ.ಉಮೇಶ್ 6 ಮತ, ಕೆ.ಕೆ.ವೆಂಕಟೇಶ್ 7 ಮತಗಳನ್ನು ಪಡೆದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಕೋಕಿಲಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.

ಅಭಿನಂದನಾ ಸಮಾರಂಭದಲ್ಲಿ ನೂತನ ಅಧ್ಯಕ್ಷ ಕೆ.ಕೆ.ವೆಂಕಟೇಶ್ ಮಾತನಾಡಿ, ಇಲ್ಲಿನ ಪಿಎಸಿಎಸ್ ಜಿಲ್ಲೆಯಲ್ಲಿಯೇ ಅತಿ ದೊಡ್ಡ ಸಹಕಾರ ಸಂಸ್ಥೆಯಾಗಿದೆ. ರೈತರ, ಷೇರುದಾರರ ಸಹಕಾರದೊಂದಿಗೆ ಎರಡನೇ ಬಾರಿಗೆ ಅಧ್ಯಕ್ಷನಾಗಿ ಆಯ್ಕೆಯಾಗಿದ್ದು, ರೈತರಿಗೆ ರಸಗೊಬ್ಬರ ಸಕಾಲಕ್ಕೆ ಸರಿಯಾಗಿ ಸಮರ್ಪಕವಾಗಿ ಪೂರೈಸುವುದಾಗಿ ತಿಳಿಸಿದರು.

ಅಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಯಿಂದ ಅವಕಾಶ ದೊರೆಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರ ಬೆಂಬಲ ಪಡೆದು ಆಯ್ಕೆಯಾಗಿದ್ದು, ಅವರ ಸಹಕಾರಕ್ಕೆ ಆಭಾರಿಯಾಗಿದ್ದೇನೆ ಎಂದರು.

ನಿರ್ಗಮಿತ ಅಧ್ಯಕ್ಷ ಟಿ.ಎಂ.ಉಮೇಶ್ ಕಲ್ಮಕ್ಕಿ ಮಾತನಾಡಿ, ಹತ್ತು ವರ್ಷಗಳ ಕಾಲ ಪಿಎಸಿಎಸ್ ಅಧ್ಯಕ್ಷನಾಗಿ ರೈತರು, ಗ್ರಾಹಕರಿಗೆ ಉತ್ತಮ ಸೇವೆ ಸಲ್ಲಿಸಿದ ಆತ್ಮತೃಪ್ತಿಯಿದೆ ಎಂದರು.

ಚುನಾವಣಾಧಿಕಾರಿಯಾಗಿ ಕೆ.ಎಂ.ಸಿ.ವಸಂತ ಕಾರ್ಯನಿರ್ವಹಿಸಿದರು. ನಿರ್ದೇಶಕರಾದ ಕೆ.ಟಿ.ವೆಂಕಟೇಶ್, ಎಂ.ಎಸ್.ಅರುಣೇಶ್, ಎಂ.ಡಿ.ಕೃಷ್ಣಪ್ಪ, ಮಹಮ್ಮದ್ ಜುಹೇಬ್, ಕೆ.ಕೆ.ಗೌತಮ್, ಸಿ.ವಿ.ಸುನೀಲ್, ಆಶಾ, ಕೆ.ಆರ್.ಸತೀಶ್, ಎಚ್.ಡಿ.ಸತೀಶ್, ಸಂಘದ ಸಿಇಒ ಎಚ್.ಉಮೇಶ್, ಸಿಬ್ಬಂದಿ ಎಚ್.ಎಂ.ವೆಂಕಟೇಶ್, ಅಣ್ಣಪ್ಪ, ನಿತ್ಯ, ಚಿರಾಗ್, ಸತೀಶ್, ಕಿಶೋರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net