

ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ಮತ್ತು ಸಂವಿಧಾನದ ಕರ್ತೃ ಭಾರತ ರತ್ನ ಬಾಬಾಸಾಹೇಬ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಮಹತ್ವದ ಸ್ಥಾನವಿದೆ. ಆದರೆ ಕಾಂಗ್ರೆಸ್ ಸಂವಿಧಾನ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಎಲ್ಲ ರೀತಿಯಲ್ಲೂ ದೊಡ್ಡ ಅಪಮಾನ ಮಾಡಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ದೂರಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಬಿಜೆಪಿ ಆಯೋಜಿಸಿದ್ದ ಸಂವಿಧಾನ ಸಮ್ಮಾನ್ ದಿನಾಚರಣೆ ಕಾರ್ಯಕ್ರಮವನ್ನುz್ದೆÃಶಿಸಿ ಮಾತನಾಡಿದ ಅವರು, ಸಂವಿಧಾನ ರಚನಾ ಸಮಿತಿ ಅಸ್ತಿತ್ವಕ್ಕೆ ಬಂದಾಗಿನಿAದಲೂ ಕಾಂಗ್ರೆಸ್ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಎಲ್ಲ ಹಂತದಲ್ಲೂ ಅಪಮಾನಿಸಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ನೆಹರು ತನ್ನ ಆಪ್ತ ಸಹಾಯಕನನ್ನು ಅಭ್ಯರ್ಥಿಯನ್ನಾಗಿಸಿ ಬಾಬಾಸಾಹೇಬರನ್ನು ಸೋಲಿಸುವ ಮೂಲಕ ದೊಡ್ಡ ಅವಮಾನವನ್ನು ಮಾಡುತ್ತಾರೆ ಎಂದು ಹರಿಹಾಯ್ದರು.
ದೇಶದಲ್ಲಿ ಸಂವಿಧಾನ ದಿನವನ್ನು ಸಮ್ಮಾನ್ ದಿನವನ್ನಾಗಿ ಆಚರಿಸಲು ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ನರೇಂದ್ರ ಮೋದಿಜಿ ಅವರ ಸರ್ಕಾರ ಅಧಿಕಾರಕ್ಕೆ ಬರಬೇಕಾಯಿತು. ಆರು ದಶಕಗಳ ಕಾಲ ದೇಶವನ್ನಾಳಿದ ಕಾಂಗ್ರೆಸ್ ಎಂದೂ ಸಂವಿಧಾನ ಮತ್ತು ಬಾಬಾಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಆಶಯಗಳನ್ನು ಅನುಷ್ಠಾನಗೊಳಿಸಲು ಚಿಂತನೆ ನಡೆಸಲೇ ಇಲ್ಲ. ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾದ ನಂತರ ೨೦೧೫ರಿಂದ ನ. ೨೬ನ್ನು ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ದೇಶದಲ್ಲಿ ಓಲೈಕೆ ರಾಜಕಾರಣದಲ್ಲಿ ತೊಡಗಿದೆ. ಕಾಂಗ್ರೆಸ್ ದೇಶದಲ್ಲಿ ನಡೆಸುತ್ತಿರುವ ಕುತಂತ್ರಗಳ ಬಗ್ಗೆ ನಾವು ಈಗಲೇ ಎಚ್ಚರಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ದೇಶ ಗಂಡಾAತರ ಎದುರಿಸಬೇಕಾಗುತ್ತದೆ ಎಂದರು.
ಚಿಕ್ಕಮಗಳೂರು ನಗರ ಮಂಡಲ ಅಧ್ಯಕ್ಷ ಕೆ.ಎಸ್.ಪುಷ್ಪರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ, ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿ ಬಿ.ರಾಜಪ್ಪ, ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯದರ್ಶಿ ಸೀತಾರಾಮಭರಣ್ಯ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ದೀಪಕ್ ದೊಡ್ಡಯ್ಯ, ಪ್ರಮುಖರಾದ ಕೋಟೆ ರಂಗನಾಥ್, ಕನಕರಾಜ ಅರಸ್, ಎಚ್.ಎಸ್.ಪುಟ್ಟೇಗೌಡ, ಸವಿತಾ ರಮೇಶ್, ಎಚ್.ಎಸ್.ಕವೀಶ್, ಬಿ.ಜಿ.ಸೋಮಶೇಖರ್, ಸಂತೋಷ್ ಕೋಟ್ಯಾನ್, ನಂದೀಶ್ ಮದಕರಿ, ಜಸಂತ ಅನಿಲ್ ಕುಮಾರ್, ರೂಪಕುಮಾರ್, ಅನುಮಧುಕರ್, ಮಣಿಕಂಠ, ಕುಮಾರ್ ಮತ್ತಿತರರಿದ್ದರು.