ಬಿ.ಇಡಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ

Published on

ಚಾಮರಾಜನಗರ: ಶಿಕ್ಷಕ ತರಬೇತಿ ಪಡೆಯುವ ಪ್ರಶಿಕ್ಷಣಾರ್ಥಿಗಳು ಸಮಯ ಪ್ರಜ್ಞೆಯನ್ನು ರೂಢಿಸಿಕೊಳ್ಳಬೇಕು ಎಂದು ಚಾಮರಾಜನಗರ ವಿಶ್ವವಿದ್ಯಾಲಯ ಕುಲಸಚಿವ ಪ್ರೊ. ಆರ್.ಲೋಕನಾಥ್ ತಿಳಿಸಿದರು.

ನಗರದ ಜೆಎಸ್‌ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರಥಮ ವರ್ಷದ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗೆ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಶಿಕ್ಷಣಾರ್ಥಿಗಳು ಶೈಕ್ಷಣಿಕ ಅಭ್ಯಾಸಕ್ಕೆ ಹೆಚ್ಚು ಮಹತ್ವ ನೀಡಬೇಕು. ಮುಂದೆ ಶಿಕ್ಷಕರಾಗಿ ಆಯ್ಕೆ ಆಗಿದ್ದಾಗ ಸಾವಿರಾರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲಿಸಲು ಸಹಕಾರಿಯಾಗಲಿದೆ ಎಂದರು.

ಮೈಸೂರು ವಿದ್ಯಾ ವಿಕಾಸ್ ಬಿ.ಇಡಿ ಕಾಲೇಜಿನ ಪ್ರಾಂಶುಪಾಲ ಡಾ.ರಾಜಗೋಪಾಲ್ ಮಾತನಾಡಿ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಕ್ರೀಡೆ, ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ಸೇವಾ ಯೋಜನೆ, ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುವ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಜೆಎಸ್‌ಎಸ್ ಶಿಕ್ಷಣ ಮಹಾವಿದ್ಯಾಲಯ ಬಿ.ಇಡಿ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಸಿ ಬಸವಣ್ಣ ಮಾತನಾಡಿ, ನಮ್ಮ ಕಾಲೇಜಿನಲ್ಲಿ ಬಿ.ಇಡಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಸರ್ಕಾರಿ ಹಾಗೂ ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಮಾಡುತ್ತಿರುವುದು ಹೆಮ್ಮೆಯ ವಿಷಯ. ಜೆಎಸ್‌ಎಸ್ ಶಿಕ್ಷಣ ಸಂಸ್ಥೆ ವಿದ್ಯಾಭ್ಯಾಸದ ತೆ ಭಾರತೀಯ ಸಂಸ್ಕೃತಿ ಬಿಂಬಿಸುವ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ ಎಂದು ತಿಳಿಸಿದರು.

ಇದೇ ವೇಳೆ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಕಾಲೇಜಿನ ಉಪನ್ಯಾಸಕರಾದ ಎಸ್.ಎನ್ ರಾಜು, ಬಿ.ಎಸ್.ಸುರೇಶ್, ಕೆ.ಎಂ ಯೋಗೇಶ್, ಕೆ.ಎಸ್.ಸಿದ್ದರಾಜು, ಶಿವಶಂಕರ ರಾಜ ಅರಸ್, ಎಂ.ಗೀತಾ ಮತ್ತು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net