

ಯಳಂದೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಬಿಳಿಗಿರಿರಂಗನಬೆಟ್ಟದ ಶ್ರೀ ಬಿಳಿಗಿರಿರಂಗನಾಥಸ್ವಾಮಿ ದೇಗುಲದಲ್ಲಿ ಗುರುವಾರ ಹುಂಡಿ ಹಣ ಎಣಿಕೆ ಮಾಡಿದ್ದು ಒಟ್ಟು 16,46,479 ರೂ.ಸಂಗ್ರಹವಾಗಿದೆ.
ಡಿ.24ರಂದು ಹುಂಡಿ ಹಣ ಎಣಿಕೆ ಮಾಡಲಾಗಿತ್ತು. 42 ದಿನದಲ್ಲಿ ಮತ್ತೆ ಹುಂಡಿಯನ್ನು ಎಣಿಕೆ ಮಾಡಲಾಗಿದೆ. ಇದರೊಂದಿಗೆ 41 ಅಮೆರಿಕನ್ ಡಾಲರ್ ಹಾಗೂ ಎರಡು ಚಿನ್ನದ ತಾಳಿಬೊಟ್ಟುಗಳು, ಬೆಳ್ಳಿಯ ಕಾಲಿನ ಚೈನು ಸಂಗ್ರಹವಾಗಿದೆ ಎಂದು ದೇಗುಲದ ಇಒ ಮೋಹನ್‌ಕುಮಾರ್ ಮಾಹಿತಿ ನೀಡಿದರು.
ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜೆ.ಶ್ರೀನಿವಾಸ್, ಪ್ರಧಾನ ಅರ್ಚಕ ರವಿಕುಮಾರ್, ಕಾವೇರಿ ಕಲ್ಪತರು ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕ ವೀರಭದ್ರಸ್ವಾಮಿ, ಪಾರುಪತ್ತೇದಾರ ರಾಜು, ದೇಗುಲದ ಸಿಬ್ಬಂದಿ ಹಾಜರಿದ್ದರು.