ಬಿ.ಸಿ. ಪಾಟೀಲ ಕ್ಷಮೆಯಾಚನೆಗೆ ಆಗ್ರಹ

18 Dwd 1
Published on

ಧಾರವಾಡ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರ ವಿರುದ್ಧ ಅವಹೇಳನಕಾರಿ ಮಾತನಾಡಿದ ಕೃಷಿ ಸಚಿವ ಬಿ.ಸಿ. ಪಾಟೀಲ ತಕ್ಷಣ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡ ರೈತರು, ಸಚಿವ ಬಿ.ಸಿ. ಪಾಟೀಲ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೋಡಿಹಳ್ಳಿ ಚಂದ್ರಶೇಖರ ರಾಜ್ಯದ ರೈತರ ಕಣ್ಮಣಿ. ಹೋರಾಟದ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸಿದ ನಾಯಕರ ಬಗ್ಗೆ ಅವಹೇಳನಕಾರಿ ಮಾತನಾಡುವುದು ಸರಿಯಲ್ಲ ಎಂದು ಖಂಡಿಸಿದರು.

ಸಚಿವ ಬಿ.ಸಿ. ಪಾಟೀಲ ಕ್ಷಮೆಯಾಚಿಸದಿದ್ದರೆ ರಾಜ್ಯಾದ್ಯಂತ ನಿರಂತರ ಹೋರಾಟ ಮಾಡುವುದಾಗಿ ಎಚ್ಚರಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿಪತ್ರ ರವಾನಿಸಿದರು.

ಪ್ರತಿಭಟನೆಯಲ್ಲಿ ರಮೇಶ ಕಿತ್ತೂರ, ಚನ್ನಬಸಪ್ಪ ಹಡಪದ, ಚಂದ್ರಶೇಖರ ಕುರಳ್ಳಿ, ಕಲ್ಮೇಶ ಲಿಗಾಡೆ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net