ಬಿಇಒ ಆಗಿ ಎಸ್.ಭಾಗ್ಯಾ ಅಧಿಕಾರ ಸ್ವೀಕಾರ

15blrp2
Published on

ಬೇಲೂರು: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಬಿ.ಎಲ್.ರಾಜೇಗೌಡ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ನೂತನವಾಗಿ ಬಿಇಒ ಆಗಿ ಎಸ್.ಭಾಗ್ಯಾ ಬುಧವಾರ ಅಧಿಕಾರ ಸ್ವೀಕರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವುದು, ಹಾಜರಾತಿ ಶೇಕಡಾವಾರು ಸುಧಾರಿಸುವುದು, ಶಿಕ್ಷಕರ ಸಹಕಾರದೊಂದಿಗೆ ಉತ್ತಮ ಶಿಕ್ಷಣ ವಾತಾವರಣ ನಿರ್ಮಾಣ ಮಾಡುವುದೇ ನನ್ನ ಪ್ರಮುಖ ಗುರಿಯಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ಶಿಕ್ಷಕರ ಸಹಕಾರದೊಂದಿಗೆ ಗುಣಮಟ್ಟದ ಶಿಕ್ಷಣ ಸೇರಿದಂತೆ ಶಿಕ್ಷಕರ ಕುಂದು ಕೊರತೆಗಳಿಗೆ ಸ್ಪಂದಿಸುವುದಾಗಿ ಎಂದು ತಿಳಿಸಿದರು.

ಕ್ಷೇತ್ರ ಸಮನ್ವಯಾಧಿಕಾರಿ ಶಿವಮರಿಯಪ್ಪ, ಶಿಕ್ಷಕರಾದ ಉದಯ ಕುಮಾರ್, ಶೇಖರ್, ಶಿವಕುಮಾರ್, ಚಂದ್ರಶೇಖರ್, ಇಸಿಒ ಶಿವಪ್ಪ, ಹರೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net