

ಯಾದಗಿರಿ: ಚುನಾವಣಾ ಕೆಲಸದಿಂದ ಅಂಗನವಾಡಿ ನೌಕರರನ್ನು ಕೈ ಬಿಡುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲೂಕು ಸಮಿತಿಯಿಂದ ಭಾನುವಾರ ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರಗೆ ಮನವಿ ಸಲ್ಲಿಸಲಾಯಿತು.
ತಾಲೂಕು ಸಂಚಾಲಕ ಮಲ್ಲಯ್ಯ ಪೋಲಂಪಲ್ಲಿ, ಸರಕಾರ ಸಮಗ್ರ ಶಿಶು ಅಭಿವೃದ್ಧಿ ಯೋಜನೆ 6 ವರ್ಷದೊಳಗಿನ ಮಕ್ಕಳನ್ನು ಮುಂದಿನ ಪ್ರಜೆಗಳನ್ನಾಗಿ ರೂಪಿಸುವ ಅತ್ಯಂತ ಮಹತ್ತರ ಉದ್ದೇಶವನ್ನಿಟ್ಟುಕೊಂಡಿದೆ. ಈ ಹಂತದಲ್ಲಿ ಮಗುವಿಗೆ ಬೇಕಾದ ಆಹಾರ, ಆರೋಗ್ಯ ಮತ್ತು ಶಿಕ್ಷಣವನ್ನು ಕೊಡಲಿಕ್ಕಾಗಿ ಪ್ರಾರಂಭಿಸಿದ್ದು, ಇಲ್ಲಿ ಅಂಗನವಾಡಿ ನೌಕರರ ಪಾತ್ರ ಮಹತ್ವದ್ದಾಗಿದೆ ಎಂದರು.
ಆದರೆ, ಸಕರ್ಾರ ಬಿಎಲ್ಒ ಸೇರಿ ವಿವಿಧ ಕೆಲಸಗಳಿಗೆ ಅಂನವಾಡಿ ನೌಕರರನ್ನು ಬಳಸಿಕೊಳ್ಳುತ್ತಿದ್ದು, ಇದರಿಂದ ಮಕ್ಕಳ ಬಗ್ಗೆ ಹೆಚ್ಚಿನ ಗಮನ ಕೊಡಲು ಆಗುತ್ತಿಲ್ಲ. ಇದರಿಂದ ಮಕ್ಕಳಲ್ಲಿ ಅಪೌಷ್ಟಿಕತೆ, ಗಭರ್ಿಣಿ ಬಾಣಂತಿ ಕಿಶೋರಿಯರ ಆರೋಗ್ಯದ ಕಡೆ ಹಾಗೂ ಮಕ್ಕಳ ಶಿಕ್ಷಣ ಕಡೆಗೆ ಗಮನಹರಿಸಲು ಸಾಧ್ಯವಾಗುತ್ತಿಲ್ಲ. ಅಲ್ಲದೆ ಅಂಗನವಾಡಿ ಕಾರ್ಯಕತರ್ೆಯರಿಗೆ ಕೆಲಸಗಳ ಒತ್ತಡದಿಂದ ಮಾನಸಿಕ ಹಾಗೂ ದೈಹಿಕವಾಗಿ ತೊಂದರೆ ಅನುಭವಿಸುತ್ತಿದ್ದಾರೆ. ಸರಕಾರ ಇದನ್ನು ಮನಗಂಡು ಅಂಗನವಾಡಿ ಕಾರ್ಯಕರ್ತರಿಗೆ ಚುನಾವಣಾ ಕೆಲಸದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದರು.