ಬಿಎಸ್‌ಪಿಗೆ ಪದಾಧಿಕಾರಿಗಳ ನೇಮಕ

Published on

ಹನೂರು: ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದ ಸಭಾಂಗಣದಲ್ಲಿ ಸೋಮವಾರ ವಿಧಾನಸಭಾ ಕ್ಷೇತ್ರದ ಬಹುಜನ ಸಮಾಜ ಪಕ್ಷದ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಜಿಲ್ಲಾ ಉಸ್ತುವಾರಿಯಾಗಿ ಬಿ.ಪುಟ್ಟಸ್ವಾಮಿ, ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ತೆಳ್ಳನೂರು ರಾಜಣ್ಣ, ಉಪಾಧ್ಯಕ್ಷರಾಗಿ ಚಿಕ್ಕಮಾಲಾಪುರ ರಾಜಣ್ಣ, ಪಾಳ್ಯ ಮಹೇಶ್‌ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಲೊಕ್ಕನಹಳ್ಳಿ ಬಸವಲಿಂಗಪ್ಪ, ಖಜಾಂಚಿಯಾಗಿ ಕಾಮಗೆರೆ ಮಲ್ಲು, ಕಚೇರಿ ಕಾರ್ಯದರ್ಶಿಯಾಗಿ ವಸಂತ್‌ಕುಮಾರ್ ಹಾಗೂ ತಾಲೂಕು ಸಂಯೋಜಕರಾಗಿ ಸಿಂಗನಲ್ಲೂರು ಪ್ರಭುಸ್ವಾಮಿ ಅವರನ್ನು ನೇಮಕ ಮಾಡಲಾಯಿತು.

ಈ ವೇಳೆ ಬಿಎಸ್ಪಿ ಜಿಲ್ಲಾಧ್ಯಕ್ಷ ಬ.ಮ.ಕೃಷ್ಣಮೂರ್ತಿ ಮಾತನಾಡಿ, ಬಿಎಸ್ಪಿಯ ನಾಯಕರು ಹಾಗೂ ಕಾರ್ಯಕರ್ತರು ಯಾವುದೇ ರಾಜಕೀಯ ಹಿನ್ನೆಲೆಯನ್ನು ಹೊಂದಿಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ, ಸಿದ್ಧಾಂತ ಹಾಗೂ ಸಂವಿಧಾನದ ಆಶಯವನ್ನು ಪ್ರಣಾಳಿಕೆಯಾಗಿರಿಸಿಕೊಂಡು ರಾಜಕೀಯವಾಗಿ ಗುರ್ತಿಸಿಕೊಂಡಿದ್ದೇವೆ. ಎಸ್ಸಿ, ಎಸ್ಟಿ, ಒಬಿಸಿ ಹಾಗೂ ಅಲ್ಪಸಂಖ್ಯಾತರ ಸರ್ವಾಂಗೀಣ ಅಭಿವೃದ್ಧಿಯೇ ಪಕ್ಷದ ಗುರಿಯಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಸಂಘಟನೆಗೆ ಹೆಚ್ಚು ಒತ್ತು ನೀಡುವುದರ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಬಿಎಸ್ಪಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಬ್ಯಾಡಮೂಡ್ಲು ಬಸವಣ್ಣ, ಜಿಲ್ಲಾ ಉಸ್ತುವಾರಿ ಸಣ್ಣಮಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net