ಬಿಎಸ್‌ವೈ ಹೆಸರಿಗೆ ಕಳಂಕ ತರುವ ಯತ್ನ

mng- sep 14- Basavaraja Bommayi
Published on

ಚಿತ್ರದುರ್ಗ: ಚುನಾವಣೆ ವೇಳೆ ರಾಜಕೀಯ ನಾಯಕರ ಹೆಸರಿಗೆ ಕಳಂಕ ತರಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದಲ್ಲಿ ಸದುದ್ದೇಶವಿಲ್ಲ. ತನಿಖೆ ಬಳಿಕ ಸತ್ಯ ಹೊರಬರಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಾನಸಿಕ ಅಸ್ವಸ್ಥ ಮಹಿಳೆ ದೂರು ದಾಖಲಿಸಿರಬಹುದು. ಹಾಗೆಂದ ಮಾತ್ರಕ್ಕೆ ಕೂಡಲೇ ಬಂಧಿಸಲು ಸಾಧ್ಯವಿಲ್ಲ. ಇನ್ನೂ ಕೆಲವರ ವಿರುದ್ಧ ಇದೇ ರೀತಿ ದೂರು ನೀಡಿದ್ದಾರೆಂಬ ಮಾಹಿತಿ ಇದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದು, ತನಿಖೆ ಮಾಡಿಸುತ್ತೇವೆ ಎಂದು ಗೃಹ ಸಚಿವರೇ ಹೇಳಿದ್ದಾರೆ. ಆನಂತರ ಸತ್ಯಕ್ಕೆ ಖಂಡಿತ ಜಯ ಸಿಗಲಿದೆ ಎಂದು ಪ್ರತಿಕ್ರಿಯಿಸಿದರು.

ದೆಹಲಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ನೇತೃತ್ವದಲ್ಲಿ ಟಿಕೆಟ್ ಹಂಚಿಕೆ ಪೈನಲ್ ಆಗುತ್ತದೆ. ಇನ್ನೆರಡು ದಿನದೊಳಗೆ ಇನ್ನುಳಿದ ಎಲ್ಲ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರು ಘೋಷಣೆ ಆಗಲಿದೆ. ಮಾಜಿ ಸಚಿವ ಈಶ್ವರಪ್ಪ ಅವರೊಂದಿಗೆ ಈಗಾಗಲೇ ನಾವು ಮತ್ತು ನಮ್ಮ ವರಿಷ್ಠರು ಮಾತನಾಡಿದ್ದಾರೆ. ಎಲ್ಲವೂ ಸರಿ ಹೋಗಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net