ಬಿಎಸ್‌ವೈ ಆರೋಪಮುಕ್ತರಾಗುವ ವಿಶ್ವಾಸ

Published on

ಹುಬ್ಬಳ್ಳಿ : ಬಿಡಿಎ ಹಗಣರದ ತನಿಖೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪ ಮುಕ್ತರಾಗುವ ವಿಶ್ವಾಸ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಕಾನೂನಿನ ಬಗ್ಗೆ ನಮಗೆ ನಂಬಿಕೆ ಇದೆ. ಕಾನೂನುಬದ್ಧವಾಗಿಯೇ ತನಿಖೆ ನಡೆಯಲಿದೆ ಎಂದರು.
ಬಿಡಿಎ ಹಗರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಗೆ ರಾಜೀನಾಮೆ ನೀಡುವ ಅಗತ್ಯವಿಲ್ಲ. ಯಡಿಯೂರಪ್ಪ ಅವರು ಯಾವುದೇ ರೀತಿಯ ಸಂವಿಧಾನಬದ್ಧ ಹುದ್ದೆಯಲ್ಲಿ ಇಲ್ಲ. ಸಂಸದೀಯ ಮಂಡಳಿ ರಾಜಕೀಯ ಪಕ್ಷದ ಹುದ್ದೆ ಎಂದರು.
ದೇಶದ ಕಾನೂನಿನ ಬಗ್ಗೆ ನಮಗೆ ನಂಬಿಕೆ ಇದೆ. ಕಾನೂನು ಬದ್ಧವಾಗಿಯೇ ಬಿಡಿಎ ಹಗರಣದ ತನಿಖೆ ನಡೆಯಲಿದೆ. ಯಡಿಯೂರಪ್ಪ ಅವರು ಯಾವುದೇ ರೀತಿಯ ತಪ್ಪು ಮಾಡಿಲ್ಲ ಎಂಬ ವಿಶ್ವಾಸ ಇದೆ ಎಂದು ಹೇಳಿದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಲೂಟಿ ರವಿ ಎಂದಿರುವುದು ತಪ್ಪು. ಸಿದ್ದರಾಮಯ್ಯ ಇರಲಿ, ಸಿ.ಟಿ. ರವಿ ಆಗಿರಲಿ ಅಥವಾ ಇನ್ನಾರೇ ಆದರೂ ಅಸಭ್ಯ ರೀತಿಯ ಶಬ್ದಗಳನ್ನು ಬಳಕೆ ಮಾಡಬಾರದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net