ಬಿಎಸ್‌ವೈ ನೇತೃತ್ವದಲ್ಲೇ ಮುಂದಿನ ಚುನಾವಣೆ: ಸಚಿವೆ ಶಶಿಕಲಾ ಜೊಲ್ಲೆ

Jolle
Published on

ವಿಜಯಪುರ: ಮುಂದಿನ ವಿಧಾನ ಸಭೆ ಚುನಾವಣೆಯನ್ನು ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲೇ ಎದುರಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಸಿಎಂ ಬದಲಾವಣೆ ವಿಷಯ ಕೇವಲ ಊಹಾಪೋಹ. ಕೆಲವರು ವದಂತಿ ಹರಡುತ್ತಿದ್ದು ಅದಕ್ಕೆಲ್ಲಾ ಕಿವಿ ಗೊಡುವ ಅವಶ್ಯಕತೆ ಇಲ್ಲ. ಯಡಿಯೂರಪ್ಪ ಅವರು ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಅವರು ಸಿಎಂ ಆದ ಬಳಿಕ ಬರ, ನೆರೆ, ಕರೊನಾ ಬಂದರೂ ಕ್ರಿಯಾಶೀಲತೆಯಿಂದ ನಿಭಾಯಿಸಿದ್ದಾರೆ. ಅವರ ನೇತೃತ್ವದಲ್ಲಿ ಎಲ್ಲ ಸಚಿವರು ಒಳ್ಳೆಯ ರೀತಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ವಿಚಾರ ಇಲ್ಲವೇ ಇಲ್ಲ ಎಂದು ಬುಧವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಸ್ವಪಕ್ಷಿಯ ಶಾಸಕರೇ ಮುಖ್ಯಮಂತ್ರಿ ವಿರುದ್ಧ ಮಾತನಾಡುವುದನ್ನು ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸುತ್ತಿದೆ. ಅದಕ್ಕೆ ಸಮರ್ಪಕವಾಗಿ ಉತ್ತರ ಕೊಡುತ್ತದೆ. ಕರೊನಾ ಸಂದರ್ಭ ಇಲ್ಲಸಲ್ಲದ ಹೇಳಿಕೆ ಕೊಡಬಾರದರು. ವದಂತಿ ಹರಡಬಾರದು. ಇದು ಬೇಜಾರದ ಸಂಗತಿ. ಅಂಥವರಿಗೆ ಹೈಕಮಾಂಡ್ ಉತ್ತರ ಕೊಡುತ್ತದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net