ಬಿಕೆಜಿ ಮೈನಿಂಗ್ ಪ್ರೈವೇಟ್ ಲಿಮಿಟೆಡ್ಗೆ ಫೈವ್ ಸ್ಟಾರ್ ರೇಟಿಂಗ್ ಪ್ರಶಸ್ತಿ

2-SanduruP1
Published on

ಸಂಡೂರು: ಬಿಕೆಜಿ ಮೈನಿಂಗ್ ಪ್ರೈವೇಟ್ ಲಿಮಿಟೆಡ್ ಹದ್ದಿನ ಪಡೆ ಕಬ್ಬಿಣದ ಅದಿರು ಗಣಿಗೆ 2021-2022ರ ಅವಧಿಯಲ್ಲಿ ಕೈಗೊಂಡ ಸುಸ್ಥಿರ ಅಭಿವೃದ್ಧಿ ಚಟುವಟಿಕೆಗಳಿಗೆ ಫೈವ್ ಸ್ಟಾರ್ ರೇಟಿಂಗ್ ಪ್ರಶಸ್ತಿ ಲಭಿಸಿದೆ.

ಮಹಾರಾಷ್ಟ್ರದ ನಾಗ್‌ಪುರದಲ್ಲಿ ಮಾ.1ರಂದು ಆಯೋಜಿಸಿದ್ದ ಇಂಡಿಯನ್ ಬ್ಯೂರೋ ಆಫ್ ಮೈನ್ಸ್‌ನ 75ನೇ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಬಿಕೆಜಿಯ ವ್ಯವಸ್ಥಾಪಕ ನಿರ್ದೇಶಕ ಬಿ.ರುದ್ರಗೌಡ, ಹಿರಿಯ ಅಧಿಕಾರಿಗಳಾದ ಪಿ.ಶ್ರೀನಿವಾಸರಾವ್ ಮತ್ತು ಪ್ರಮೋದ ರಿತ್ತಿ ಅವರು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ದಾದ ಜೋಶಿಯವರಿಂದ ಪ್ರಶಸ್ತಿ ಸ್ವೀಕರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net