ಬಿಜೆಪಿ ಅಪಪ್ರಚಾರಕ್ಕೆ ತಕ್ಕ ಪಾಠ

abbayya prasad
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ಉಪ ಚುನಾವಣೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಮತದಾರರು ಬಿಜೆಪಿಗರಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದ್ದಾರೆ.

ಸಂಡೂರು, ಚನ್ನಪಟ್ಟಣ ಮತ್ತು ಶಿಗ್ಗಾಂವಿ ಮತಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾಂಗ್ರೆಸ್ ವಿರುದ್ಧ ಬಿಜೆಪಿ ಸಾಕಷ್ಟು ಅಪ ಪ್ರಚಾರ ನಡೆಸಿತ್ತು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಜನಪರ ಕಾರ್ಯಕ್ರಮಗಳಿಗೆ ಜನರು ಮನ್ನಣೆ ನೀಡುವ ಮೂಲಕ ಉತ್ತಮ ಆಡಳಿತವನ್ನು ಬೆಂಬಲಿಸಿದ್ದಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಷ್ಟೇ ಷಡ್ಯಂತ್ರ ಮಾಡಿದರೂ ಬಿಜೆಪಿಗರ ಆಟ ಉಪ ಚುನಾವಣೆಯಲ್ಲಿ ನಡೆಯಲಿಲ್ಲ. ಇಂದಿನ ಉಪಚುನಾವಣೆಯ ಗೆಲುವು ಇನ್ನಷ್ಟು ಬಲ ನೀಡಿದಂತಾಗಿದೆ. ಕಾಂಗ್ರೆಸ್ ಯಾವತ್ತು ಬಡವರ ಮತ್ತು ಜನಪರ ಆಡಳಿತ ನೀಡುತ್ತದೆ ಎಂಬುದಕ್ಕೆ ಮೂರು ಕ್ಷೇತ್ರಗಳ ಗೆಲುವೇ ನಿದರ್ಶನವಾಗಿದೆ. ಇನ್ನು ರಾಜ್ಯದಲ್ಲಿ ಬಿಜೆಪಿಯ ಯಾವುದೇ ಷಡ್ಯಂತ್ರಗಳು ಫಲಿಸುವುದಿಲ್ಲ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net