ಬಿಜೆಪಿ ಅಭ್ಯರ್ಥಿಪರ ಗೂಳಿಹಟ್ಟಿ ಬ್ಯಾಟಿಂಗ್

gulihatti shekar hosadurga mla
Published on

ಚಿತ್ರದುರ್ಗ : ಗೋವಿಂದ ಎಂ.ಕಾರಜೋಳ ಅವರು ಅಧಿಕಾರದಲ್ಲಿದ್ದಾಗ ಹೊಸದುರ್ಗ ವಿಧಾನಸಭಾ ಕ್ಷೇತ್ರಕ್ಕೆ ನೂರಾರು ಕೋಟಿ ರೂ.ವಿಶೇಷ ಅನುದಾನ ಕೊಟ್ಟಿದ್ದಾರೆ ಎಂದು ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನೀಗ ಯಾವ ಪಕ್ಷದಲ್ಲೂ ಇಲ್ಲ. ಮುಂದೆ ಕೂಡ ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಳ್ಳದೇ ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದು ತಿಳಿಸಿದರು.
2008ರಲ್ಲಿ ಪಕ್ಷೇತರನಾಗಿ ವಿಧಾನಸಭೆಗೆ ಸ್ಪರ್ಧಿಸಿದ್ದಾಗ ಕ್ಷೇತ್ರದ ಹರಿಜನರು ಹೆಚ್ಚಿನ ಪ್ರಮಾಣದಲ್ಲಿ ನನ್ನನ್ನು ಬೆಂಬಲಿಸಿದ್ದರು. ಅವರ ಋಣ ನನ್ನ ಮೇಲಿದ್ದು ಹೀಗಾಗಿ ಕಾರಜೋಳ ಅವರನ್ನು ವೈಯಕ್ತಿಕವಾಗಿ ಬೆಂಬಲಿಸಿದ್ದೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net