ಬಿಜೆಪಿ ಕಮಿಷನ್ ಹೊಡೆಯುವ ಸರ್ಕಾರ

congress
Published on

ಯಾದಗಿರಿ: ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆಗೆ ಕಾರಣರಾದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿತು. ಪಕ್ಷದ ಕಚೇರಿಯಿಂದ ಗಾಂಧಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಬಿಜೆಪಿ ಸಕರ್ಾರದ ವಿರುದ್ಧ ಹರಿಹಾಯ್ದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮಾತನಾಡಿ, ಸರ್ಕಾರಿ ಕಾಮಗಾರಿಗಳಲ್ಲಿ ಕಮಿಷನ್ ಕೇಳಲಾಗುತ್ತಿದೆ ಎಂದು ಗುತ್ತಿಗೆದಾರರ ಸಂಘ ನೇರವಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ. ಕೊನೆಗೆ ಸಂತೋಷ ಪಾಟೀಲ್ ಈ ಜಾಲದಲ್ಲಿ ಸಿಲುಕಿ ಜೀವ ಕಳೆದುಕೊಳ್ಳಬೇಕಾಯಿತು. ಸಂತೋಷ ಆತ್ಮಹತ್ಯೆಗೆ ಮಾಜಿ ಸಚಿವ ಈಶ್ವರಪ್ಪ ನೇರ ಕಾರಣ. ಕಾನೂನು ಎಲ್ಲರ ದೃಷ್ಟಿಯಿಂದ ಒಂದೇ. ಪ್ರಕರಣದಲ್ಲಿ ಆರೋಪಿಯಾಗಿರುವ ಈಶ್ವರಪ್ಪ ಹಾಗೂ ಅವರ ಸಹಚರರನ್ನು ಇನ್ನೂ ಯಾಕೆ ಬಂಧಿಸಿಲ್ಲ? ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಲು ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಮೃತ ಸಂತೋಷ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಬೇಕು ಹಾಗೂ ಅವರಿಗೆ ಕೊಡಬೇಕಾಗಿದ್ದ 4 ಕೋಟಿ ಬಿಲ್ ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಶಾಸಕ ಶರಣಬಸಪ್ಪ ದರ್ಶನಾಪುರ, ಪಕ್ಷದ ಜಿಲ್ಲಾಧ್ಯಕ್ಷ ಮರಿಗೌಡ ಹುಲಕಲ್, ಮಾಜಿ ಎಂಎಲ್ಸಿಗಳಾದ ಶರಣಪ್ಪ ಮಟ್ಟೂರ, ಚೆನ್ನಾರೆಡ್ಡಿ ಪಾಟೀಲ್ ತುನ್ನೂರು, ಮಾಜಿ ಕಾಡಾ ಅಧ್ಯಕ್ಷ ಶ್ರೀನಿವಾಸರೆಡ್ಡಿ ಕಂದಕೂರು, ಮಾಣಿಕರೆಡ್ಡಿ ಕುರಕುಂದಿ, ಅವಿನಾಶ ಜಗನ್ನಾಥ, ರಾಘವೇಂದ್ರ ಮಾನಸಗಲ್, ಮಂಜುಳಾ ಗೂಳಿ, ಚಿದಾನಂದಪ್ಪ ಕಾಳಬೆಳಗುಂದಿ, ಶರಣು ಮೋದಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net