ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ

Published on

ಗುಂಡ್ಲುಪೇಟೆ: ಅನುಮತಿ ಪಡೆಯದೆ ಕ್ರೀಡಾಂಗಣ ಬಳಕೆ ಮಾಡಿಕೊಂಡ ಬಗ್ಗೆ ಚುನಾವಣಾಧಿಕಾರಿಗಳು ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಏ.17ರಂದು ಬಿಜೆಪಿ ಅಭ್ಯರ್ಥಿ ಸಿ.ಎಸ್.ನಿರಂಜನಕುಮಾರ್ ನಾಮಪತ್ರ ಸಲ್ಲಿಸುವ ವೇಳೆ ಅನುಮತಿ ಪಡೆದುಕೊಳ್ಳದೆ ಕ್ರೀಡಾಂಗಣದಲ್ಲಿ ವಾಹನ ನಿಲುಗಡೆ ಮಾಡಿಕೊಳ್ಳಲಾಗಿತ್ತು. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿರುವ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಬಿ.ಎಸ್.ಕೆಂಪಲಿಂಗಪ್ಪ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಬಿಜೆಪಿ ಕಾರ್ಯಕರ್ತ ಕೆ.ಎಸ್.ಶಿವಪ್ರಕಾಶ್ ವಿರುದ್ಧ ಐಪಿಸಿ 188 ಅಡಿ ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net