ಬಿಜೆಪಿ ಕಾರ್ಯಕರ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ವದಂತಿ: ಸರ್ಪಗಾವಲು

ಬಿಜೆಪಿ ಕಾರ್ಯಕರ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ವದಂತಿ: ಸರ್ಪಗಾವಲು
Published on

ಹಾಸನ :  ಬಿಜೆಪಿ ಕಾರ್ಯಕರ್ತನ ಮನೆ ಹತ್ತಿರ ಉಡುಗೊರೆ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆ ಮುತ್ತಿಗೆ ಹಾಕಲಿದ್ದಾರೆ ಎಂಬ ವದಂತಿ ಹಬ್ಬಿದ್ದರಿಂದ ಪೊಲೀಸ್ ಠಾಣೆಯ ಮುಂದೆ ಸೋಮವಾರ 200 ಮಂದಿ ಪೊಲೀಸ್ ಸಿಬ್ಬಂದಿ ಕಾವಲಿಗೆ ಹಾಕಲಾಗಿತ್ತು.
ಹಾಸನದ ಜಿಲ್ಲಾ ಪಂಚಾಯಿತಿ ಕಚೇರಿಯಿಂದ ಎನ್ ಆರ್ ವೃತ್ತದವರೆಗೆ ರಸ್ತೆ ಬಂದ್ ಮಾಡಲಾಗಿತ್ತು. ಎಎಸ್ಪಿ ತಮ್ಮಯ್ಯ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಎರಡು ದಿನಗಳ ಹಿಂದೆ ಮತದಾರರಿಗೆ ಹಂಚಲು ತಂದಿದ್ದಾರೆಂಬ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತ ಗಗನ್ ಗಾಂಧಿ ಮನೆ ಸಮೀಪ ವಾಹನವೊಂದಲ್ಲಿದ್ದ 1400 ಬೆಳ್ಳಿಯ ಅಷ್ಟ ಲಕ್ಷ್ಮೀ ದೇವರ ಪೋಟೋಗಳು ಪೊಲೀಸರು ಜಪ್ತಿ ಮಾಡಿದ್ದರು.
ವ್ಯಾಪಾರದ ಉದ್ದೇಶದಿಂದ ಈ ಫೋಟೋಗಳನ್ನು ತರಿಸಲಾಗಿದೆ. ಫೋಟೋಗಳಿಗೆ ಖರೀದಿ ಬಿಲ್ ಇದ್ದರೂ ಪೊಲೀಸರು ದೌರ್ಜನ್ಯ ನಡೆಸಿ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆಂದು ಠಾಣೆಗೆ ಬಿಜೆಪಿ ಕಾರ್ಯಕರ್ತರು ದೂರು ನೀಡಿದ್ದರು. ದೂರು ನೀಡಿದರೂ ಪ್ರಕರಣ ದಾಖಲಾಗದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ತಯಾರಿ ನಡೆಸಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತು. ಹೀಗಾಗಿ ಸೋಮವಾರ ರಾತ್ರಿ 200 ಪೊಲೀಸ್ ಸಿಬ್ಬಂದಿಯನ್ನು ಕಾವಲಿಗೆ ನೇಮಿಸಿ, ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net