ಬಿಜೆಪಿ ಕಾರ್ಯಕರ್ತರಿಂದ ರೌಡಿಸಂ ಸಂಸ್ಕೃತಿ

974dad97-12ca-4106-932a-f64953c1304c
Published on

ಮೈಸೂರು: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸುವ ಮೂಲಕ ಬಿಜೆಪಿ ಕಾರ್ಯಕರ್ತರು ರೌಡಿಸಂ ಸಂಸ್ಕೃತಿಯನ್ನು ಪ್ರದರ್ಶಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಶಿವಣ್ಣ ಆರೋಪಿಸಿದರು.

ಲಕ್ಷ್ಮಣ್ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಮುಂದಾಗಿದ್ದು ಖಂಡನೀಯ. ಈ ಕುರಿತು ಕಾಂಗ್ರೆಸ್ ಕಾನೂನು ಘಟಕದ ಮೂಲಕ ಪೊಲೀಸರಿಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಲಾಗಿದೆ. ಪೊಲೀಸರು 2 ದಿನ ಕಾಲಾವಕಾಶ ನೀಡುವಂತೆ ಕೋರಿದ್ದು, ಅಲ್ಲಿಯವರೆಗೂ ತಾಳ್ಮೆಯಿಂದ ಕಾಯಲಾಗುವುದು. ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಕಾನೂನು ಹೋರಾಟ ಮಾಡಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.

ಲಕ್ಷ್ಮಣ್ ಅವರು ದಾಖಲೆಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಪ್ರಶ್ನಿಸುತ್ತಾ ಬಂದಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯವಾಗಿ ಹೋರಾಟ ಮಾಡಬೇಕು. ಆದರೆ, ಲಕ್ಷ್ಮಣ್‌ರನ್ನು ಎದುರಿಸಲಾಗದೆ ಅವರ ಮನೆಗೆ ಮುತ್ತಿಗೆ ಹಾಕಲು ಹೋಗಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿದ್ದು, ಇದು ರೌಡಿಸಂ ವರ್ತನೆಯಾಗಿದೆ. ಆದರೆ, ಈ ರೀತಿ ಕಾಂಗ್ರೆಸ್ ವರ್ತನೆ ಮಾಡಲ್ಲ. ಪ್ರಜಾಸತಾತ್ಮಕವಾಗಿ ಹೋರಾಟ ನಡೆಸಲಿದೆ ಎಂದರು.

ಮುತ್ತಿಗೆ ಹಾಕಲು ಯತ್ನಿಸಿದ್ದ ಗುಂಪಿನಲ್ಲಿದ್ದ ಮೈಸೂರು ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕಿರಣ್‌ಗೌಡ ಹಿಂದೆ ರೌಡಿಶೀಟರ್ ಆಗಿದ್ದು, ಮೈಸೂರಿನಿಂದ ಗಡಿಪಾರು ಆಗಿದ್ದಲ್ಲದೇ ಹಲವು ದಿನಗಳ ಕಾಲ ಜೈಲಿನಲ್ಲಿದ್ದು ಬಂದಿದ್ದಾರೆ. ಶುಕ್ರವಾರ ನಡೆದ ಘಟನೆ ಬಿಜೆಪಿಯ ರೌಡಿ ಸಂಸ್ಕೃತಿಯನ್ನು ಬಿಂಬಿಸಿದೆ. ಮೈಸೂರು ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರ ಹಿನ್ನೆಲೆಯನ್ನು ಪೊಲೀಸರು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net