ಬಿಜೆಪಿ ಕಿತ್ತೊಗೆಯಲು ಜನ ಸಂಕಲ್ಪ ಮಾಡಿದ್ದಾರೆ

siddaramaiah-4951
Published on

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿ ಸಂಕಲ್ಪ ಯಾತ್ರೆ ವಿಫಲವಾಗಿದೆ. ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ಜನ ಸಂಕಲ್ಪ ಮಾಡಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಕಾರ್ಯಕರ್ತರನ್ನು ಕೂಡಿಡಲು ಬಿಜೆಪಿಯವರು ಗೇಟ್​ಗೆ ಬೀಗ ಹಾಕಿ ಸಂಕಲ್ಪ ಯಾತ್ರೆ ಸಮಾವೇಶ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಜನರು ಸಂಕಲ್ಪ ಮಾಡಿದ್ದಾರೆ ಎಂಬುದು ಇದರ್ಥ ಎಂದರು.

ಆರ್ಥಿಕವಾಗಿ ಹಿಂದುಳಿವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಕಲ್ಪಿಸುವ ಸುಪ್ರೀಂ ಕೋರ್ಟ್​ನ ತೀರ್ಪ್​ನ್ನು ಓದಿಲ್ಲ. ಆದರೆ, ಸಂವಿಧಾನದ ಆರ್ಟಿಕಲ್ 14, 15ರ ಪ್ರಕಾರ ಅದಕ್ಕೆ ಅವಕಾಶವಿಲ್ಲ ಎಂದು ನಾನು ತಿಳಿದುಕೊಂಡಿದ್ದೇನೆ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಬೇಕು ಎಂದು ಸಂವಿಧಾನ ಹೇಳಿದೆ ಎಂದರು.

ಹಿಂದು ಎಂಬುದು ಅಶ್ಲೀಲ ಪದ ಎಂದು ಹೇಳಿರುವ ಸತೀಶ ಜಾರಕಿಹೊಳಿಗೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ ಸಿಂಗ್ ಸುರ್ಜೆವಾಲಾ ಅವರು ಈಗಾಗಲೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರ ಹೇಳಿಕೆ ಪಕ್ಷದ ನಿಲುವು ಆಗಿದ್ದು, ನಮ್ಮದು ಸಹ ಅದೇ ಅಭಿಪ್ರಾಯವಾಗಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net