ಬಿಜೆಪಿ ಕಿತ್ತೊಗೆಯಲು ಜನರ ನಿರ್ಧಾರ

ಗುಂಡ್ಲುಪೇಟೆ ತಾಲೂಕಿನ ಕೊಡಸೋಗೆ ಗ್ರಾಮದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಬೂತ್ ಮಟ್ಟದ ಸಭೆಯಲ್ಲಿ ಗಣೇಶ್ ಪ್ರಸಾದ್, ಎಚ್.ಎಸ್.ನಂಜುಂಡಪ್ರಸಾದ್, ಎಚ್.ಎಸ್.ನಂಜಪ್ಪ, ಎ.ಸಿದ್ದರಾಜು, ಗಂಗಪ್ಪ, ಎಚ್.ಎನ್.ಬಸವರಾಜು ಇದ್ದರು.
08-GPT-3A
Published on

ಗುಂಡ್ಲುಪೇಟೆ: ದಿ.ಮಹದೇವಪ್ರಸಾದ್ ಅವಧಿಯಲ್ಲಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಕೈಗೊಂಡಿದ್ದ ಕಾರ್ಯಕ್ರಮಗಳ ಬಗ್ಗೆ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮನವರಿಕೆ ಮಾಡಿಕೊಡಬೇಕು ಎಂದು ಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶ್‌ಪ್ರಸಾದ್ ಹೇಳಿದರು.


ತಾಲೂಕಿನ ಕೊಡಸೋಗೆ ಗ್ರಾಮದಲ್ಲಿ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಬೂತ್ ಮಟ್ಟದ ಸಭೆಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಬೆಲೆ ಏರಿಕೆ ಮುಂತಾದ ಜನವಿರೋಧಿ ನೀತಿಗಳಿಂದ ಜನತೆ ಬೇಸತ್ತಿದ್ದಾರೆ. ಇಂದಿನ ಪರಿಸ್ಥಿತಿಯಲ್ಲಿ ಸಾಮಾನ್ಯರು ಬದುಕಲಾಗದ ಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರವನ್ನು ಕಿತ್ತೊಗೆಯಲು ಕಾಯುತ್ತಿದ್ದಾರೆ ಎಂದರು.


ಸಭೆಯಲ್ಲಿ ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಮಾಜಿ ಸಂಸದ ಎ.ಸಿದ್ದರಾಜು, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಗಂಗಪ್ಪ, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ವೀರಶೈವ ಮಹಾಸಭಾ ಜಿಲ್ಲಾ ನಿರ್ದೇಶಕ ಕೆ.ಎಂ.ಬಸವಣ್ಣ, ಬಗರ್‌ಹುಕುಂ ಸಮಿತಿಯ ಮಾಜಿ ಅಧ್ಯಕ್ಷ ಕೆ.ಎಲ್.ಚಂದ್ರಶೇಖರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಬಿ.ರಾಜಶೇಖರ್, ಮುನಿರಾಜು ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net