ಬಿಜೆಪಿ ಜನಾಕ್ರೋಶ ಯಾತ್ರೆ

9 ckm 4 lokesh
ಬಿಜೆಪಿ ಜಿಲ್ಲಾ ವಕ್ತಾರ ಸಿ.ಎಚ್.ಲೋಕೇಶ್
Published on

ಚಿಕ್ಕಮಗಳೂರು: ಬೆಲೆ ಏರಿಕೆ, ಮುಸ್ಲಿಮರ ಓಲೈಕೆ ಮತ್ತು ರಾಜ್ಯ ಸರ್ಕಾರದಿಂದ ದಲಿತರ ಹಣ ಲೂಟಿ ಮಾಡುತ್ತಿರುವುದನ್ನು ವಿರೋಧಿಸಿ ರಾಜ್ಯ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಏ. ೧೦ರಂದು ಜಿಲ್ಲೆಗೆ ಆಗಮಿಸುತ್ತಿದೆ. ಅಂದು ಸಂಜೆ ನಾಲ್ಕು ಗಂಟೆಗೆ ಚಿಕ್ಕಮಗಳೂರು ನಗರಕ್ಕೆ ಆಗಮಿಸಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸಿ.ಎಚ್.ಲೋಕೇಶ್ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಮಾರ್ಗವಾಗಿ ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಲಿರುವ ಯಾತ್ರೆಯನ್ನು ಮೊದಲು ಶೃಂಗೇರಿಯಲ್ಲಿ ಬರಮಾಡಿಕೊಳ್ಳಲಾಗುವುದು. ಅಲ್ಲಿಂದ ಚಿಕ್ಕಮಗಳೂರು ನಗರಕ್ಕೆ ಆಗಮಿಸುವ ಯಾತ್ರೆಯನ್ನು ಹೊರವಲಯದ ಗವನಹಳ್ಳಿಯಲ್ಲಿ ಸ್ವಾಗತಿಸಲಾಗುವುದು ಎಂದು ಹೇಳಿದರು.

ಜನಾಕ್ರೋಶ ಯಾತ್ರೆಯ ಅಂಗವಾಗಿ ನಗರದ ಬಸವನಹಳ್ಳಿಯ ಶಂಕರಮಠದ ಬಳಿ ಇರುವ ವೃತ್ತದಲ್ಲಿ ಸಭೆ ನಡೆಸಲಾಗುವುದು. ನಂತರ ಬಸವನಹಳ್ಳಿ ಮುಖ್ಯ ರಸ್ತೆ, ಹನುಮಂತಪ್ಪ ವೃತ್ತ, ಎಂಜಿ ರಸ್ತೆಯಲ್ಲಿ ಯಾತ್ರೆ ಸಾಗಿ ಅಜಾದ್ ಪಾರ್ಕ್ನಲ್ಲಿ ಸಂಪನ್ನಗೊಳ್ಳಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ಯಾತ್ರೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ. ಸರ್ಕಾರದ ವಿರುದ್ಧದ ಈ ಕಾರ್ಯಕ್ರಮದಲ್ಲಿ ಕನಿಷ್ಠ ಪಕ್ಷ ೮ ಸಾವಿರ ಮಂದಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಕಳೆದ ಎರಡು ವರ್ಷಗಳಲ್ಲಿ ರಾಜ್ಯ ಸರ್ಕಾರ ಹಾಲಿನ ದರವನ್ನು ಬರೋಬ್ಬರಿ ಒಂಬತ್ತು ರೂಪಾಯಿ ಹೆಚ್ಚಳ ಮಾಡಿದೆ. ಆದರೆ ಜನರ ದಾರಿ ತಪ್ಪಿಸುವ ಉz್ದೆÃಶದಿಂದ ಕೇಂದ್ರ ಸರ್ಕಾರ ಡೀಸೆಲ್ ಹಾಗೂ ಪೆಟ್ರೋಲ್ ಬೆಲೆ ಹೆಚ್ಚಿಸಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಸತತವಾಗಿ ಎರಡು ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಳ ಮಾಡಿದ್ದು ಇದೇ ರಾಜ್ಯ ಸರ್ಕಾರ. ಜೊತೆ ಜೊತೆಗೆ ದಿನಬಳಕೆ ವಸ್ತುಗಳ ಮೇಲೆ ಪ್ರತಿ ದಿನ ತೆರಿಗೆ ಹೆಚ್ಚಳ ಮಾಡಲಾಗುತ್ತಿದೆ. ಇದೆಲ್ಲವನ್ನು ಖಂಡಿಸಿ ಜನಾಕ್ರೋಶ ಯಾತ್ರೆ ನಡೆಸಲಾಗುತ್ತಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರರಾದ ಹಿರೇಮಗಳೂರು ಪುಟ್ಟಸ್ವಾಮಿ, ಬೀಕನಹಳ್ಳಿ ಸೋಮಶೇಖರ್, ಬಿಜೆಪಿ ಜಿಲ್ಲಾ ಖಜಾಂಚಿ ನಾರಾಯಣಗೌಡ ಉಪಸ್ಥಿತರಿದ್ದರು.

ಬಾಕ್ಸ್.....

ದಲ್ಲಾಳಿಗಳಿಂದ ಬೆಳೆಗಾರರಿಗೆ ಮೋಸ

ಚಿಕ್ಕಮಗಳೂರು ಜಿಲ್ಲೆಯಲ್ಲಿ ದಲ್ಲಾಳಿಗಳ ಮಾಫಿಯಾ ಮಿತಿಮೀರಿದೆ. ಇದರಿಂದಾಗಿ ಕಾಫಿ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಭಾರಿ ಅನ್ಯಾಯವಾಗುತ್ತಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸಿ.ಎಚ್.ಲೋಕೇಶ್ ತಿಳಿಸಿದರು.

ಅಂತರಾಷ್ಟಿö್ರÃಯ ಮಾರುಕಟ್ಟೆಯಲ್ಲಿ ಕಾಫಿಗೆ ಬಾರಿ ಬೇಡಿಕೆ ಇದೆ. ಅದರಂತೆ ಪ್ರತಿ ಕುಂಟ ಅರೇಬಿಕ ಪಾರ್ಟ್ಮೆಂಟಿಗೆ ೩೮ ಸಾವಿರ ರೂ. ಹಾಗೂ ರೊಬೋಸ್ಟಾ ಪಾರ್ಚ್ಮೆಂಟಿಗೆ ೩೫ ಸಾವಿರ ರೂ. ದರ ಸಿಗಬೇಕಿತ್ತು. ಆದರೆ ವ್ಯಾಪಾರಿಗಳು ಹಾಗೂ ದಲ್ಲಾಳಿಗಳ ಕುತಂತ್ರದಿAದಾಗಿ ಬೆಳೆಗಾರರಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಇನ್ನು ಕಾಳು ಮೆಣಸು ಖರೀದಿಯಲ್ಲಿಯೂ ಬೆಳಗಾರರಿಗೆ ಅನ್ಯಾಯ ಮಾಡಲಾಗುತ್ತಿದೆ. ನ್ಯಾಯಯುತವಾಗಿ ಕಾಳುಮೆಣಸು ಪ್ರತಿ ಕೆಜಿಗೆ ೮೦೦ ರೂಪಾಯಿಯಿಂದ ೯೦೦ ರೂಪಾಯಿಗೆ ಖರೀದಿ ಮಾಡಬೇಕು. ಆದರೆ ಮಧ್ಯವರ್ತಿಗಳ ಕುತಂತ್ರದಿAದಾಗಿ ಕಾಳುಮೆಣಸಿನ ದರ ೭೦೦ ಮೇಲೆ ಏರಿಕೆಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net