ಬಿಜೆಪಿ, ಜೆಡಿಎಸ್ ತೊರೆದೆ ಕಾಂಗ್ರೆಸ್ ಸೇರ್ಪಡೆ

IMG_20230507_110310
ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮುಖಂಡರು ಶಾಸಕ ಆರ್.ನರೇಂದ್ರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾದರು. ಮಾದೇವ, ಕೃಷ್ಣಮೂರ್ತಿ, ತಾಜೀನ್, ಮಹದೇವಪ್ಪ, ಇಂದ್ರೇಶ್ ಇತರರು ಇದ್ದರು.
Published on

ಹನೂರು: ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಜೆಡಿಎಸ್ ಹಾಗೂ ಬಿಜೆಪಿಯ 20ಕ್ಕೂ ಹೆಚ್ಚು ಕಾರ್ಯಕರ್ತರು ಶಾಸಕ ಆರ್.ನರೇಂದ್ರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾದರು.

ಶಾಸಕ ಆರ್.ನರೇಂದ್ರ ಮಾತನಾಡಿ, ಕಾಂಗ್ರೆಸ್ ಸಿದ್ಧಾಂತ, ಉತ್ತಮ ಆಡಳಿತ ಹಾಗೂ ಕ್ಷೇತ್ರದಲ್ಲಿ ನಡೆದಿರುವ ಅನೇಕ ಶಾಶ್ವತ ಯೋಜನೆಗಳನ್ನು ಮೆಚ್ಚಿ ಇತರ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಯಾಗುತ್ತಿರುವುದು ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಂತಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಗೆಲುವಿನ ಮುನ್ಸೂಚನೆಯಾಗಿದೆ ಎಂದು ತಿಳಿಸಿದರು.

ತಾಪಂ ಮಾಜಿ ಸದಸ್ಯ ಮಾದೇವ ಮಾತನಾಡಿ, ಕಳೆದ 40 ವರ್ಷದಿಂದ ಕಾಂಗ್ರೆಸ್‌ನಲ್ಲಿದ್ದು ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗಿತ್ತು. ಈ ದಿಸೆಯಲ್ಲಿ ತಾಪಂ ಸದಸ್ಯನಾಗಿದ್ದೆ. ಆದರೆ ಕೆಲವು ಕಾರಣಾಂತರದಿಂದ ಜೆಡಿಎಸ್‌ಗೆ ಸೇರ್ಪಡೆಗೊಳ್ಳಬೇಕಾಯಿತು. ಆದರೆ ಜೆಡಿಎಸ್‌ನಲ್ಲಿ ಏಕಪಕ್ಷಿಯ ನಿರ್ಧಾರದಿಂದ ನಮ್ಮನ್ನು ಕಡೆಗಣಿಸಲಾಗಿತ್ತು. ಇದರಿಂದ ಬೇಸತ್ತು ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ. ಈ ಬಾರಿಯ ಚುನಾವಣೆಯಲ್ಲಿ ಶಾಸಕ ಆರ್. ನರೇಂದ್ರ ಅವರನ್ನು ಗೆಲ್ಲಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ತಿಳಿಸಿದರು.

ಗ್ರಾಪಂ ಸದಸ್ಯ ಕೃಷ್ಣಮೂರ್ತಿ, ಮಾಜಿ ಅಧ್ಯಕ್ಷ ತಾಜೀನ್, ಮಹದೇವಪ್ಪ, ಇಂದ್ರೇಶ್, ಚಂದ್ರು ಇತರರು ಕಾಂಗ್ರೆಸ್ ಸೇರ್ಪಡೆಯಾದರು. ಪಪಂ ಉಪಾಧ್ಯಕ್ಷ ಗಿರೀಶ್, ಮಾಜಿ ಉಪಾಧ್ಯಕ್ಷ ಮಾದೇಶ್, ಮುಖಂಡರಾದ ಟಿ.ಮಹದೇವ, ಸಿದ್ದಪ್ಪ ಚೇತನ್, ಚೆಲುವರಾಜು, ಶೇಕ್‌ಫೀರ್, ನಾಗೇಶ್, ನಾಗೇಂದ್ರ, ಸೋಮಶೇಖರ್, ನಟರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net