ಬಿಜೆಪಿ-ಜೆಡಿಎಸ್‌ನಿಂದ ಕೋಮುವಾದಿ ರಾಜಕಾರಣ

DSS
Published on

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ-ಜೆಡಿಎಸ್ ಕುತಂತ್ರ ರೂಪಿಸಿದ್ದು, ಕೋಮುವಾದಿ ರಾಜಕಾರಣಕ್ಕೂ ಮುಂದಾಗಿದೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಮಿತಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಅಧಿಕಾರದ ಆಸೆಗೆ ಸಂವಿಧಾನ ಬಾಹಿರವಾಗಿ ಸುಭದ್ರ ಸರ್ಕಾರ ಅಸ್ಥಿರಗೊಳಿಸುವ ಹುನ್ನಾರಕ್ಕೆ ಮುಂದಾಗಿದೆ. ಚುನಾವಣೆಗಳನ್ನೇ ಕೇಂದ್ರವಾಗಿಸಿಕೊಂಡು ಹಿಂದುತ್ವ, ಅಖಂಡ ಭಾರತ ಎಂಬ ಭಾವನಾತ್ಮಕ ವಿಷಯ ಪ್ರಸ್ತಾಪಿಸಿ ಜನಸಾಮಾನ್ಯರ ದಿಕ್ಕು ತಪ್ಪಿಸುತ್ತಿದೆ ಎಂದು ದೂರಿದರು.

ರೈತರ, ಕಾರ್ಮಿಕರ, ನಿರುದ್ಯೋಗ, ಅಗತ್ಯ ವಸ್ತುಗಳ ಬೆಲೆ ಏರಿಕೆ ಸೇರಿ ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸುವುದನ್ನು ಬಿಟ್ಟು ಮುಡಾ ಪ್ರಕರಣ ಮುಂದಿಟ್ಟುಕೊಂಡು ದ್ವೇಷ ರಾಜಕೀಯಕ್ಕೆ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮಿತಿಯ ರಾಜ್ಯ ಸಂಸ್ಥಾಪಕ ಸಂಯೋಜಕ ವಿ.ನಾಗರಾಜ, ಪದಾಧಿಕಾರಿಗಳಾದ ಎಚ್.ಎನ್.ಅಣ್ಣಯ್ಯ, ಟಿ.ಮಾರುತಿ, ಟಿ.ಕೆ.ರಾಜಯ್ಯ, ದಿನೇಶ್, ಆರ್.ತಿಪ್ಪೇಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net