ಬಿಜೆಪಿ ದುರಾಡಳಿತ ಮಾಹಿತಿ ಜನರಿಗೆ ನೀಡಿ

14M.D.R.2
ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆ ಮದ್ದೂರು ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಿದರು. ಎಸ್.ಗುರುಚರಣ್, ಪಿ.ಸಂದರ್ಶ, ಅಮರ್ ಬಾಬು, ಸಿದ್ದು ಇದ್ದರು.
Published on

ಮದ್ದೂರು: ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರಗಳ ದುರಾಡಳಿತ ಬಗ್ಗೆ ಜನರಿಗೆ ತಿಳಿಸಬೇಕೆಂದು ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಲಹೆ ನೀಡಿದರು.


ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆ ಬುಧವಾರ ಮದ್ದೂರಿನ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆ ಅಭೂತಪೂರ್ವ ಕಾರ್ಯಕ್ರಮವಾಗಿದೆ. ಹೀಗಾಗಿ ಎಲ್ಲ ತಾಲೂಕುಗಳಿಗೂ ಪರಿಶೀಲನೆಗೆ ತರಳುತ್ತಿದ್ದೇನೆ ಎಂದು ತಿಳಿಸಿದರು.


ಜಿಲ್ಲೆಯಲ್ಲಿ ಸಂಸದೆ ಸುಮಲತಾ ಹಾಗೂ ಜೆಡಿಎಸ್ ಶಾಸಕರು ನಡುವೆ ನಡೆಯುತ್ತಿರುವ ಕಮಿಷನ್ ವಿಷಯವಾಗಿ ಕೇಳಲಾದ ಪ್ರಶ್ನೆಗೆ ಅವರು ಉತ್ತರಿಸಿ, ಅದು ಅವರವರ ವೈಯಕ್ತಿಕ ವಿಚಾರಗಳಾಗಿದ್ದು, ಆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.


ಕೆಪಿಸಿಸಿ ಸದಸ್ಯ ಎಸ್.ಗುರುಚರಣ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಪುರಸಭಾ ಮಾಜಿ ಅಧ್ಯಕ್ಷ ಎಂ.ಪಿ.ಅಮರ್ ಬಾಬು, ಮುಖಂಡರಾದ ಸಿದ್ದು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net