

ಮಡಿಕೇರಿ: ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರನ್ನು ಭೇಟಿ ಮಾಡಿ ಕೊಡಗಿನಲ್ಲಿ ನಡೆದ ವಿದ್ಯಮಾನಗಳ ಮಾಹಿತಿ ನೀಡಿದರು.
ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆ.18 ರಂದು ಜಿಲ್ಲೆಗೆ ಭೇಟಿ ನೀಡಿದ ಬಳಿಕ ನಡೆದ ಘಟನಾವಳಿಗಳ ವಿವರ ನೀಡಿದ್ದಾರೆ. ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಉದ್ದೇಶಿಸಿತ ಜನಜಾಗೃತಿ ಸಮಾವೇಶ ಆಯೋಜಿಸಲು ಸಾಧ್ಯವಾಗುತ್ತಿಲ್ಲ. ಮುಂದೆ ಯಾವ ರೀತಿ ಹೋರಾಟ ನಡೆಸಬೇಕೆಂಬ ಕುರಿತು ಚರ್ಚಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಜಿ.ವಿ.ರಾಜೇಶ್, ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.