ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಮಾವೇಶ ಡಿ. 18ಕ್ಕೆ

BJP Meeting
Published on

ಬೀದರ್: ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಮಾವೇಶ ಡಿ. 18 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಹ ಸಂಯೋಜಕ ಜಯತೀರ್ಥ ಕಟ್ಟಿ ಹೇಳಿದರು.
ನಗರದ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ನಡೆದ ಸಮಾವೇಶದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದ ಎಲ್ಲ ಜಿಲ್ಲೆಗಳ ಪ್ರಕೋಷ್ಠಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯ 24 ಪ್ರಕೋಷ್ಠಗಳ 1,500 ಪದಾಧಿಕಾರಿಗಳು ಹಾಗೂ ಸದಸ್ಯರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಶ್ರೀಕಾಂತ ಮೋದಿ ಹೇಳಿದರು.
ಬಿಜೆಪಿ ಕಲಬುರ್ಗಿ ವಿಭಾಗ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ರಾಜ್ಯ ವೈದ್ಯಕೀಯ ಪ್ರಕೋಷ್ಠದ ಸಂಚಾಲಕ ಡಾ. ಮಹೇಶ ನಾಲವಾಡ, ಸದಸ್ಯೆ ಡಾ. ಸುಧಾ ಹಲ್ಕೈ, ಅಸಂಘಟಿತ ಪ್ರಕೋಷ್ಠದ ರಾಜ್ಯ ಸಹ ಸಂಚಾಲಕ ವೀರೇಶ ಸಂಗಲಾದ್, ಡಾ. ಆನಂದ ಕ್ರಿಶಾಲ್, ರಾಜ್ಯ ಪ್ರಕೋಷ್ಠಗಳ ಸದಸ್ಯರಾದ ವೀರಣ್ಣ ಕಾರಬಾರಿ, ಬಸವರಾಜ ಪಾಟೀಲ, ಗೋಪಾಲ್ ಕುಕಡಾಲ್, ಪೂರ್ವ ಸೈನಿಕ ಪ್ರಕೋಷ್ಠದ ನಾಗನಾಥ ಮೇತ್ರೆ ಇದ್ದರು. ಶಶಿಧರ ಆನಂದ ಮಠ ನಿರೂಪಿಸಿದರು.
ಜಿಲ್ಲೆಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಹಾಗೂ ಸಹ ಸಂಚಾಲಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net