ಬಿಜೆಪಿ ಬಂಡಾಯ ಅಭ್ಯರ್ಥಿ ಸಜ್ಜನ್

suresh sajjan1
Published on

ಕಲಬುರಗಿ: ಈಶಾನ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿ ಸುರೇಶ ಸಜ್ಜನ್ ಪಕ್ಷೇತರರಾಗಿ ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿಗಾಗಿ ಹಗಲಿರಳು ದುಡಿದಿದ್ದು, ಟಿಕೆಟ್‌ಗಾಗಿ ಹಲವು ಬಾರಿ ಪ್ರಯತ್ನ ಮಾಡಲಾಗಿದೆ. ಆದರೆ ಪಕ್ಷ ಕಡೆಗಣಿಸಿದೆ. ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಸುತ್ತಾಡಿ ಪದವೀಧರರ ನೋಂದಣಿ ಹೆಚ್ಚಿನ ಪ್ರಮಾಣದಲ್ಲಿ ಮಾಡಿಸಲಾಗಿದೆ. ಕ್ಷೇತ್ರ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಪಕ್ಷ ಪರಿಗಣಿಸದ್ದರಿಂದ ಅನಿವಾರ್ಯವಾಗಿ ಪಕ್ಷೇತರನಾಗಿ ಸ್ಪರ್ಧಿಸುತ್ತಿರುವುದಾಗಿ ಸಜ್ಜನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net