ಬಿಜೆಪಿ ಬಲವರ್ಧನೆ ಕಾರ್ಯಕ್ರಮ ನಾಳೆ

SRP_02-01
Published on

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಬಲವರ್ಧನೆಗೆ ಬಿಜೆಪಿ ರಾಜ್ಯಾಧ್ಯಕ್ಷರು ನ. 4ರಂದು ಆಗಮಿಸುತ್ತಿದ್ದು, ಜಿಲ್ಲೆಯ ನಾಯಕರು, ಸಾವಿರಾರು ಕಾರ್ಯಕರ್ತರೊಂದಿಗೆ ಬರಮಾಡಿಕೊಳ್ಳುತ್ತಿದ್ದೇವೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಪೀಹಳ್ಳಿ ರಮೇಶ್ ತಿಳಿಸಿದರು.

ಪಟ್ಟಣದಲ್ಲಿ ಬುಧವಾರ ಜಿಲ್ಲಾಮಟ್ಟದ ಪದಾಧಿಕಾರಿಗಳೊಂದಿಗೆ ಪೂರ್ವಸಭೆ ನಡೆಸಿದ ಬಳಿಕ ಅವರು ಮಾತನಾಡಿದರು. ಪಟ್ಟಣದ ಟಿಎಪಿಸಿಎಂಎಸ್ ಕಲ್ಯಾಣಮಂಟಪದಲ್ಲಿ ಶುಕ್ರವಾರ ಬೆಳಗ್ಗೆ 11ಕ್ಕೆ ಪಕ್ಷದ ಬಲವರ್ಧನೆಗೆ ಕಾರ್ಯಕ್ರಮ ಪ್ರಾರಂಭವಾಗಲಿದೆ. ಪಕ್ಷದ ರಾಜ್ಯಾಧ್ಯಕ್ಷರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಮಹತ್ವಪೂರ್ಣ ಯೋಜನೆ ಮತ್ತು ಸಾಧನೆಗಳ ಕುರಿತು ಮಾತನಾಡಲಿದ್ದಾರೆ. ಬೂತ್ ಮಟ್ಟದಿಂದ ಪಕ್ಷ ಬಲವರ್ಧಿಸುವ ಕುರಿತು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಿದ್ದಾರೆ. ಹಾಗಾಗಿ ಸುಮಾರು 4 ಸಾವಿರ ಕಾರ್ಯಕರ್ತರು ಭಾಗಿಯಾಗುವ ನೀರಿಕ್ಷೆ ಇದೆ ಎಂದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಡಾ.ಸಿದ್ದರಾಮಯ್ಯ, ರಾಜ್ಯ ರೈತ ಮೋರ್ಚ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ, ಜಿಲ್ಲಾ ಉಪಾಧ್ಯಕ್ಷ ಟಿ.ಶ್ರೀಧರ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಮಹದೇವು, ನಗರಸಭೆ ಮಾಜಿ ಸದಸ್ಯ ಅರುಣ್ ಕುಮಾರ್, ಮಂಡಲ ಪ್ರಧಾನ ಕಾರ್ಯದರ್ಶಿ ಬಿ.ಸಿ.ಸಂತೋಷ್ ಕುಮಾರ್, ಮುಖಂಡರಾದ ಪುಟ್ಟರಾಮು, ದೇವರಾಜು, ಬಿ.ಸಿ.ಕೃಷ್ಣೇಗೌಡ, ಹುಂಡುವಾಡಿ ಮಹದೇವು, ಪ್ರಭಾಕರ್ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net