ಬಿಜೆಪಿ ಬೂತ್‌ ವಿಜಯ ಅಭಿಯಾನ!...

ಬಿಜೆಪಿ ಬೂತ್‌ ವಿಜಯ ಅಭಿಯಾನ!...
Published on

ಆಲೂರು : ವಿಧಾನಸಭಾ ಚುನಾವಣೆಗೆ ಮತಗಟ್ಟೆ ಹಂತದಲ್ಲಿ ಪಕ್ಷವನ್ನು ಸಜ್ಜುಗೊಳಿಸುವುದಕ್ಕಾಗಿ ಬಿಜೆಪಿಯು ಹಮ್ಮಿಕೊಂಡಿರುವ ಬೂತ್‌ ವಿಜಯ ಅಭಿಯಾನವು ಸೋಮವಾರ ಪಟ್ಟಣದ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಆಲೂರು-ಕಟ್ಟಾಯ ಮಂಡಲದ  ಬಿಜೆಪಿ ಅಧ್ಯಕ್ಷ ಹುಲ್ಲಹಳ್ಳಿ ನಾಗರಾಜ್ ಅವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.

ಆಲೂರು ಕಟ್ಟಾಯ ಮಂಡಲದ ಅಧ್ಯಕ್ಷ ಹುಲ್ಲಹಳ್ಳಿ ನಾಗರಾಜ್ ಮಾತನಾಡಿ, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಜ.2 ರಿಂದ  12 ರವರೆಗೂ ಅಭಿಯಾನ ನಡೆಯಲಿದ್ದು ಮುಂದಿನ ಮೂರು ತಿಂಗಳಲ್ಲಿ ರಾಜ್ಯ ವಿಧಾನಸಭೆಯ ಚುನಾವಣಾಗಳು ಬರಲಿದ್ದು ಭೂತ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಮಗೆ ನಿಗದಿ ಪಡಿಸಿದ ಬೂತ್ ಗಳಲ್ಲಿ ಮನೆಮನೆಗೆ ತೆರಳಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳನ್ನು ತಿಳಿಸುವ ಮೂಲಕ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದರು. ಭೂತ್ ಗೆದ್ದರೆ ದೇಶ ಗೆದ್ದಂತೆ ಎನ್ನುವಂತೆ ಬೂತ್ ಮಟ್ಟದಲ್ಲಿ ಪಕ್ಷದ ಪರವಾಗಿ ಮತ ಚಲಾವಣೆಯಾಗುವಂತೆ ನೋಡಿಕೊಳ್ಳಬೇಕು ಸೋಮಶೇಖರ್,ಸಿಮೆಂಟ್ ಮಂಜುನಾಥ್ ಅಥವಾ ಇನ್ನೂ  ಯಾರೇ ಅಭ್ಯರ್ಥಿಗಳಾಗಲಿ ನಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪೂವಯ್ಯ ಮಾತನಾಡಿ ಅತಿ ಶೀಘ್ರದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ಬರುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಪದಾಧಿಕಾರಿಗಳು ಮುಖ್ಯಸ್ಥರು ಕಾರ್ಯಕರ್ತರು ಎಲ್ಲರೂ ಸೇರಿ ಒಟ್ಟಾಗಿ ಸತತ ಸಭೆಗಳನ್ನು ನಡೆಸುವ ಮೂಲಕ ಪಕ್ಷ ಸಂಘಟನೆಗೆ ಅಣಿಯಾಗಬೇಕು ಬಿಜೆಪಿ ಅಭ್ಯರ್ಥಿ ನಗಣ್ಯ ಪಕ್ಷ ಯಾರನ್ನೇ ಅಭ್ಯರ್ಥಿ ಮಾಡಿದರೂ ಗೆಲುವು ನಮ್ಮದಾಗಿರಬೇಕು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾರ್ಥಕ ಕಾರ್ಯಕ್ರಮಗಳ ಕುರಿತು ರೈತರಿಗೆ ಹಾಗೂ ಜನಸಾಮಾನ್ಯರಿಗೆ ಅರಿವು ಮೂಡಿಸಬೇಕು ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಎಲ್ಲರಿಗೂ ಅರ್ಥವಾಗುವ ರೀತಿಯಲ್ಲಿ ಅರಿವು ಮೂಡಿಸಿ ಬಿಜೆಪಿ ಸರ್ಕಾರಗಳ ಸಾಧನೆಗಳ ಬಗ್ಗೆ ತಿಳಿಸುವ ಕೆಲಸವನ್ನು ಪ್ರತಿ ಕಾರ್ಯಕರ್ತರು ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ಮುಖಂಡರಾದ ಎ.ಎಚ್. ರಮೇಶ್, ಕದಾಳು ಲೋಕೇಶ್, ಅಜಿತ್ ಚಿಕ್ಕಣಗಾಲ್, ಕ್ಯಾಂಟೀನ್ ನಾಗರಾಜ್, ಮಂಡಲದ ಖಜಾಂಚಿ  ಹೇಮಂತ್, ಮಂಡಲದ ಉಪಾಧ್ಯಕ್ಷ ಶೇಖರ್,ಪ್ರಧಾನ ಕಾರ್ಯದರ್ಶಿ ಭರಣ್,ಸಂದೇಶ್,ನಗರ ಬಿಜೆಪಿ ಅಧ್ಯಕ್ಷ ಲೋಹಿತ್,ಕಸಬಾ ಬಿಜೆಪಿ ಅಧ್ಯಕ್ಷ ನಟರಾಜ್ ಸೊಂಪುರ,ಬಿಜೆಪಿ ಹಿಂದುಳಿದ ವರ್ಗಗಳ ಅಧ್ಯಕ್ಷ ಮೋಹನ್,ಕಟ್ಟಾಯ ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ಕಿರಣ್ ಕುಮಾರ್,ನಗರಸಭೆಯ ನಾಮನಿರ್ದೇಶಕ ಅಮೃತ ಹಾಗೂ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net