ಬಿಜೆಪಿ ಬೆಂಬಲಿತರ ಗೆಲುವು

11Rajesh6
Published on

ಚಾಮರಾಜನಗರ: ಬಿಜೆಪಿ ವಶದಲ್ಲಿರುವ ತಾಲೂಕಿನ ಹರವೆ ಗ್ರಾಮ ಪಂಚಾಯಿತಿಯಲ್ಲಿ ಮತ್ತೆ ಕಮಲ ಅಧಿಕಾರ ಹಿಡಿದಿದೆ. ಮಂಗಳವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಬೆಜೆಪಿ ಬೆಂಬಲಿತರು ಗೆಲುವು ಸಾಧಿಸಿದದರು.

ಗ್ರಾಮ ಪಂಚಾಯಿತಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮಾದಪ್ಪ, ಉಪಾಧ್ಯಕ್ಷ ಸ್ಥಾನಕ್ಕೆ ಪುಟ್ಟಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಇವರಿಬ್ಬರ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ತಾಲೂಕು ಪಂಚಾಯಿತಿ ಯೋಜನಾಧಿಕಾರಿ ಕಿರಣ್‌ಕುಮಾರ್ ೋಷಿಸಿದರು. ಹರವೆ ಗ್ರಾಮ ಪಂಚಾಯಿತಿಯಲ್ಲಿ ಕಳೆದ ಸಲ ಅಧ್ಯಕ್ಷರಾಗಿದ್ದ ಗಿರೀಶ್ ಮತ್ತು ಉಪಾಧ್ಯಕ್ಷ ರಾಜಮ್ಮ ಬಿಜೆಪಿ ಬೆಂಬಲಿತರಾಗಿದ್ದರು. ಇವರು ಒಪ್ಪಂದಂತೆ ಸ್ಥಾನ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಚುನಾವಣೆ ಹಿಡೆಯಿತು. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಮತ್ತೆ ಅಧಿಕಾರ ಹಿಡಿದಿಯುವ ಮೂಲಕ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹರವೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ಮೇಲುಗೈ ಸಾಧಿಸಿದಂತಾಯಿತು. ನೂತನ ಅಧ್ಯಕ್ಷ ಮಾದಪ್ಪ ಮತ್ತು ಉಪಾಧ್ಯಕ್ಷೆ ಪುಟ್ಟಮ್ಮ ಅವರನ್ನು ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ಸನ್ಮಾನಿಸಿದರು. ಪ್ರಧಾನ ಕಾರ್ಯದರ್ಶಿಗಳಾದ ಪಿ. ವೃಷಬೇಂದ್ರಪ್ಪ, ಮೂಡ್ನಾಕೂಡು ಪ್ರಕಾಶ್, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಅಧ್ಯಕ್ಷ ಮೂಡ್ಲುಪುರ ನಂದೀಶ್ , ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರವೆ ಮಹೇಶ್ ಮತ್ತು ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net