ಬಿಜೆಪಿ ಯುವ ಮೋರ್ಚಾ ಸಹಾಯವಾಣಿ

Chandrashekhar Patil
Published on

ಬೀದರ್: ಕರೊನಾ ಎರಡನೇ ಅಲೆ ಸಂಕಷ್ಟದ ಸಂದರ್ಭದಲ್ಲಿ ಸಾರ್ವಜನಿಕರಿಗೆ ನೆರವಾಗಲೆಂದು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ ಎಂದು ಮೋರ್ಚಾ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ ಪಾಟೀಲ್ ತಿಳಿಸಿದ್ದಾರೆ.

ಕರೊನಾ ಹಿನ್ನೆಲೆಯಲ್ಲಿ ಜನ ಆತಂಕದಲ್ಲಿದ್ದಾರೆ. ಅವರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ, ತಿಳಿವಳಿಕೆ ಸಿಗದ ಕಾರಣ ಮರಣ ಪ್ರಮಾಣ ಹೆಚ್ಚುತ್ತಿದೆ. ಹೀಗಾಗಿ ಮೋರ್ಚಾ ಕಾರ್ಯಕರ್ತರ ಮೂಲಕ ಕೋವಿಡ್ ಸೋಂಕಿತರಿಗೆ ಎಲ್ಲ ರೀತಿಯ ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆ ಆರಂಭಿಸಲಾಗಿದೆ. ಬೀದರ್ ತಾಲೂಕು-7846999900, ಭಾಲ್ಕಿ-8618283938, ಹುಮನಾಬಾದ್-7760156866, ಔರಾದ್-8123979550/9900231996 ಹಾಗೂ ಬಸವಕಲ್ಯಾಣ ತಾಲೂಕು-8884914260 ಸಂಖ್ಯೆಗೆ ಕರೆ ಮಾಡಬಹುದು. ಸಹಾಯವಾಣಿ ಶೀಘ್ರ ಕಾರ್ಯನಿರ್ವಹಿಸುತ್ತಿದ್ದು, ಕೋವಿಡ್ ಸಂಬಂಧಿಸಿದ ಸಮಸ್ಯೆಗಳಿಗೆ ಕರೆ ಮಾಡಿ ಪರಿಹಾರ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net