ಬಿಜೆಪಿ ರಾಜ್ಯಾಧ್ಯಕ್ಷ ಬಂಧನ ಖಂಡಿಸಿ, ಪ್ರತಿಭಟನೆ

12 YERRISWAMY 05
Published on

ಬಳ್ಳಾರಿ : ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧಕ್ಷ ಬಿ.ವೈ.ವಿಜಯೇಂದ್ರ ಬಂಧನ ಖಂಡಿಸಿ, ಇಲ್ಲಿನ ರಾಯಲ್ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಶುಕ್ರವಾರ ಪ್ರತಿಭಟಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ ಮೋಕಾ ಮಾತನಾಡಿ, ಕಾಂಗ್ರೆಸ್ ಸರ್ಕಾರ ತನ್ನ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಬಿಜೆಪಿ ನಾಯಕರನ್ನು ಬಂಧಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರವಲ್ಲ, ಇದು ಟಿಪ್ಪು ಸುಲ್ತಾನ್ ಸರ್ಕಾರ ಎಂದು ಕಿಡಿಕಾರಿದರು. ಮುಡಾ ಹಗರಣದಲ್ಲಿ ಕೋಟಿ ಕೋಟಿ ಹಣ ಕೊಳ್ಳೆ ಹೊಡೆದಿದ್ದಾರೆ. ಲೂಟಿ ಬಗ್ಗೆ ಪ್ರಶ್ನೆ ಮಾಡಿ ಪ್ರತಿಭಟನೆ ಮಾಡಿದರೇ ಬಂಧಿಸುವುದರಲ್ಲಿ ಯಾವ ನ್ಯಾಯವಿದೆ. ಕಾಂಗ್ರೆಸ್ ಸರ್ಕಾರ ಹಿಟ್ಲರ್ ನೀತಿಯನ್ನು ಅನುಸರಿಸ್ತಿದೆ. ಕೂಡಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಬಳಿಕ ಬಿಜೆಪಿ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ, ರಸ್ತೆ ಮೇಲೆ ಧರಣಿ ಕುಳಿತ ಕಾಂಗ್ರೆಸ್ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net