

ಬೀದರ್: ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಜಿಪಂ ಮಾಜಿ ಅಧ್ಯಕ್ಷ ಕುಶಾಲ ಪಾಟೀಲ್ ಗಾದಗಿ ಅವರನ್ನು ನೇಮಿಸಿ ಮೋರ್ಚಾ ರಾಜ್ಯಾಧ್ಯಕ್ಷರೂ ಆದ ಸಂಸದ ಈರಣ್ಣ ಕಡಾಡಿ ಆದೇಶ ಹೊರಡಿಸಿದ್ದಾರೆ.
ರೈತಪರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕೇಂದ್ರ, ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ರೈತರಿಗೆ ಮುಟ್ಟಿಸುವ ಮೂಲಕ ಪಕ್ಷ ಸಂಘಟನೆ ಬಲಪಡಿಸುವ ಕೆಲಸದಲ್ಲಿ ತೊಡಗುವಂತೆ ಸೂಚಿಸಿದ್ದಾರೆ.