ಬಿಜೆಪಿ ಸರ್ಕಾರ ರೈತ ವಿರೋಧಿ

2008Klb02
Published on

ಕಲಬುರಗಿ: ಸರ್ಕಾರ ರಾಜ್ಯ ಭೂ ಸುಧಾರಣಾ ಕಾಯ್ದೆ ಸುಗ್ರೀವಾಜ್ಞೆ ತಂದಿರುವುದು, ಎಪಿಎಂಸಿ ಕಾಯ್ದೆಗಳ ತಿದ್ದುಪಡಿ ಹಾಗೂ ಕರೊನಾ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅಕ್ರಮ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಕರೊನಾ ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದೆ. ಕರೊನಾ ಹೆಸರಿನಲ್ಲಿ ಲೂಟಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಪಕ್ಷವು ಜನಧ್ವನಿ ಹೋರಾಟ ನಡೆಸಿತು.
ಜಿಲ್ಲಾಧ್ಯಕ್ಷ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ್ ಮಾತನಾಡಿ, ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವ ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.
ಕರೊನಾ ನಿಯಂತ್ರಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ. ಕೋವಿಡ್ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ. ಪಾಸಿಟಿವ್ ಬಂದ ವ್ಯಕ್ತಿಗಳಿಗೆ ಚಿಕಿತ್ಸೆ ನೀಡುತ್ತಿಲ್ಲ. ಹೀಗಾಗಿ ರೋಗ ಹರಡಲು ಕಾರಣವಾಗುತ್ತಿದೆ ಎಂದು ದೂರಿದರು.
ಪ್ರಮುಖರಾದ ತಿಪ್ಪಣ್ಣಪ್ಪ ಕಮಕನೂರ, ಶರಣಕುಮಾರ ಮೋದಿ, ನೀಲಕಂಠರಾವ ಮೂಲಗೆ, ಬಾಬು ಒಂಟಿ, ಸಂತೋಷ ಪಾಟೀಲ್ ದಣ್ಣೂರ, ಈರಣ್ಣ ಝಳಕಿ, ವಿಜಯಲಕ್ಷ್ಮೀ ಹಾಗರಗಿ, ಚಂದ್ರಿಕಾ ಪರಮೇಶ್ವರ, ಮಹಿಮೂದ್ ಪಟೇಲ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net