ಬಿಜೆಪಿ ಸರ್ಕಾರ ಹೇಳಿಕೊಳ್ಳುವ ಸಾಧನೆ ಮಾಡಿಲ್ಲ

bkt-11-3
ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಸುತಗುಂಡಾರ ಗ್ರಾಮದ ೫೦ ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಮಾಜಿ ಸಚಿವ ಎಚ್.ವೈ.ಮೇಟಿ ಸಮ್ಮುಖದಲ್ಲಿ ಕಾಂಗ್ರೇಸ್ ಸೇರ್ಪಡೆಗೊಂಡರು
Published on

ಬಾಗಲಕೋಟೆ: ಬಿಜೆಪಿ ಸರ್ಕಾರ ಹೇಳಿಕೊಳ್ಳುವ ಸಾಧನೆ ಮಾಡಿಲ್ಲ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಇದಕ್ಕೆ ಮತದಾರರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಚಿವ ಎಚ್.ವೈ.ಮೇಟಿ ಹೇಳಿದರು.

ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಮಂಗಳವಾರ ಸುತಗುಂಡಾರ ಗ್ರಾಮದ ೫೦ಕ್ಕೂ ಅಽಕ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್‌ಗೆ ಬರಮಾಡಿಕೊಂಡು ಅವರು ಮಾತನಾಡಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಕೈಗೊಂಡ ರೈತಪರ, ಜನಪರ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ನಾವು ಮುಂದಿಟ್ಟು ಜನತೆಗೆ ಮತಯಾಚಿಸುವದರ ಜತೆಗೆ ಗ್ಯಾರಂಟಿ ಕಾರ್ಡ್ಗಳನ್ನು ನೀಡಿ ಮತಯಾಚಿಸುತ್ತಿದ್ದೇವೆ. ಆದರೆ ಬಿಜೆಪಿ ಸರ್ಕಾರಗಳ ಸಾಧನೆ ಶೂನ್ಯವಾಗಿದೆ. ಕಾಂಗ್ರೆಸ್ ವಿರುದ್ದ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಇಂತಹ ಹುಸಿ ಆರೋಪಗಳಿಗೆ ಜನತೆ ಸೊಪ್ಪು ಹಾಕುವುದಿಲ್ಲ ಎಂದರು.

ಜಿ.ಪಂ ಮಾಜಿ ಅಧ್ಯಕ್ಷ ಬಸವಂತಪ್ಪ ಮೇಟಿ ಮಾತನಾಡಿ, ಬಿಜೆಪಿಯು ಜನರ ದಿಕ್ಕು ತಪ್ಪಿಸಿ ದುರಾಡಳಿತ ನಡೆಸುತ್ತಿದೆ. ಕಾಂಗ್ರೆಸ್ ಮುಂದಿನ ಭಾರಿ ಅಽಕಾರಕ್ಕೆ ಬರುವುದು ನಿಶ್ಚಿತ ಎಂದರು.

ಮುಂಖಡರಾದ ಉಮೇಶ ಮೇಟಿ, ಸಂಗಮೇಶ ದೊಡಮನಿ, ಜೆಟ್ಟೆಪ್ಪ ಮಾದಾಪುರ, ಹನಮಂತ ಪೂಜಾರಿ, ಶ್ರೀಕರ ದೇಸಾಯಿ, ಹುಲಪ್ಪ ತೇಜಿ, ಶಿವಪ್ಪ ನುಗ್ಗಿ, ಶಿದಪ್ಪ ಕುಂಚಗನೂರ, ಗುಳಪ್ಪ ನುಗ್ಗಿ, ಶಂಕ್ರಪ್ಪ ನುಗ್ಗಿ ಸೇರಿದಂತೆ ಇತರರು ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net