ಬಿಜೆಪಿ ಸರ್ಕಾರದ ಸಾಧನೆ ತಿಳಿಸಿ

05-GPT-2
ಗುಂಡ್ಲುಪೇಟೆ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ಪಟ್ಟಣದಲ್ಲಿ ನಿರಂಜನಕುಮಾರ್ ಕರಪತ್ರ ವಿತರಿಸಿದರು. ಪಿ.ಗಿರೀಶ್, ಸದಸ್ಯರಾದ ನಾಗೇಶ್, ವೆಂಕಟೇಶ್, ಶಶಿಧರ(ದೀಪು), ನಾರಾಯಣಸ್ವಾಮಿ ಇದ್ದರು.
Published on

ಗುಂಡ್ಲುಪೇಟೆ: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಜನರಿಗಾಗಿ ಕೈಗೊಂಡಿರುವ ಕ್ರಮಗಳನ್ನು ಮನೆ ಮನೆಗೆ ತಲುಪಿಸಿ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು.

ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ಭಾನುವಾರ ಪಟ್ಟಣದ ಎಲ್ಲ 23 ವಾರ್ಡ್‌ಗಳಲ್ಲಿಯೂ ಮನೆ ಮನೆಗೆ ಪೋಸ್ಟರ್ ಹಚ್ಚುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಜನಪರವಾದ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದ್ದಾರೆ. ಆದ್ದರಿಂದ ಕಾರ್ಯಕರ್ತರು ಮತದಾರರ ಮನೆಗಳಿಗೆ ತೆರಳಿ ಸರ್ಕಾರದ ಸಾಧನೆಗಳನ್ನು ತಿಳಿಸಿ ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.

ಸದಸ್ಯರಾದ ಪುರಸಭಾ ಅಧ್ಯಕ್ಷ ಪಿ.ಗಿರೀಶ್, ಸದಸ್ಯರಾದ ನಾಗೇಶ್, ವೆಂಕಟೇಶ್, ಶಶಿಧರ(ದೀಪು), ನಾರಾಯಣಸ್ವಾಮಿ ಹಲವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net