ಬಿಜೆಪಿ ಸರ್ಕಾರದಿಂದ ಜಿಲ್ಲೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ

07-GPT-2
ಗುಂಡ್ಲುಪೇಟೆ ಪಟ್ಟಣದ ಸಿಎಂಎಸ್ ಕಲಾಮಂದಿರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ವಿ.ಸೋಮಣ್ಣ ಮಾತನಾಡಿದರು. ಸಿ.ಎಸ್.ನಿರಂಜನಕುಮಾರ್, ದೊಡ್ಡಹುಂಡಿ ಜಗದೀಶ್, ಆರ್.ಸುಂದರ್, ಸೋಮಶೇಖರ್ ಹಿರೀಕಾಟಿ, ಕೆ.ಆರ್.ಲೋಕೇಶ್ ಇದ್ದರು.
Published on

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಸುಮಾರು ಒಂದು ಸಾವಿರ ಕೋಟಿ ರೂ.ಗೂ ಹೆಚ್ಚಿನ ಅನುದಾನ ನೀಡಿದೆ ಎಂದು ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.

ಡಿ. 12ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮರಾಜನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದ ಸಿಎಂಎಸ್ ಕಲಾಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ನಂಜುಂಡಪ್ಪ ವರದಿಯ ಹಿನ್ನೆಲೆಯಲ್ಲಿ ಸರ್ಕಾರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ದೊಡ್ಡ ಪ್ರಮಾಣದ ಅನುದಾನವನ್ನು ಬಿಡುಗಡೆ ಮಾಡಿದೆ. ಹಿಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅಂದು ನೀರಾವರಿ ಸಚಿವರಾಗಿದ್ದ ಬೊಮ್ಮಾಯಿ 400 ಕೋಟಿ ರೂ.ಗೂ ಹೆಚ್ಚಿನ ಅನುದಾನ ನೀಡಿದ್ದರು. ಇದರಿಂದ ಗುಂಡ್ಲುಪೇಟೆ ಸೇರಿದಂತೆ ಜಿಲ್ಲೆಯ ರೈತರಿಗೆ ಹೆಚ್ಚಿನ ಅನುಕೂಲವಾಗಿದೆ. ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜು, ಮಲೆಮಹದೇಶ್ವರ ಬೆಟ್ಟದ ಅಭಿವೃದ್ಧಿ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಎಲ್ಲ ಬಡವರಿಗೂ ವಸತಿ ಯೋಜನೆಯಲ್ಲಿ ವಸತಿ ನೀಡುವ ಸಲುವಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಲಾಗಿದ್ದು ನೂತನ ತಂತ್ರಜ್ಞಾನದ ಮೂಲಕ ನಿವೇಶನ ಕೊಡಲಾಗುವುದು ಎಂದರು. ಶಾಸಕ ಸಿ.ಎಸ್.ನಿರಂಜನಕುಮಾರ್, ಬಿಜೆಪಿ ಮಂಡಲಾಧ್ಯಕ್ಷ ದೊಡ್ಡಹುಂಡಿ ಜಗದೀಶ್, ಜಿಲ್ಲಾಧ್ಯಕ್ಷ ಆರ್.ಸುಂದರ್, ಉಪಾಧ್ಯಕ್ಷ ಸೋಮಶೇಖರ್ ಹಿರೀಕಾಟಿ, ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷ ಕೆ.ಆರ್.ಲೋಕೇಶ್, ಎಪಿಎಂಸಿ ಅಧ್ಯಕ್ಷ ರವಿ, ಬಗರ್‌ಹುಕುಂ ಸಮಿತಿಯ ಉಪಾಧ್ಯಕ್ಷ ನಿಟ್ರೆ ನಾಗರಾಜಪ್ಪ, ಮುಖಂಡರಾದ ಕೊಡಸೋಗೆ ಶಿವಬಸಪ್ಪ, ಎನ್.ಮಲ್ಲೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net