ಬಿಜೆಪಿ ಸೇರಿದ ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ, ಕ್ಷೇತ್ರದಲ್ಲಿ ಬಿಜೆಪಿಗೆ ಆನೆ ಬಲ

M.1 dhl X MLA BJP Serpade News ph 1
Published on

ದೇವನಹಳ್ಳಿ: ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಮತ್ತು ಜೆಡಿಎಸ್‌ನ ಅನೇಕ ಮುಖಂಡರಿಗೆ ಬಿಜೆಪಿ ಸೇರ್ಪಡೆಯಾದರು.

ಪಿಳ್ಳಮುನಿಶಾಮಪ್ಪ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದು, ಇವರ ಸೇರ್ಪಡೆಯಿಂದ ಕ್ಷೇತ್ರದಲ್ಲಿ ಬಿಜೆಪಿಗೆ ಆನೆ ಬಲ ಬಂದಂತಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎ.ವಿ. ನಾರಾಯಣಸ್ವಾಮಿ ತಿಳಿಸಿದರು.

ಮಾಜಿ ಶಾಸಕ ಜಿ.ಚಂದ್ರಣ್ಣ ಮಾತನಾಡಿ, ಜೆಡಿಎಸ್‌ನಿಂದ ಶಾಸಕರಾಗಿದ್ದ ಪಿಳ್ಳಮುನಿಶಾಮಪ್ಪ ಆ ಪಕ್ಷದ ಮುಖಂಡರ ನಡವಳಿಕೆಯಿಂದ ಬೇಸತ್ತು ಬಿಜೆಪಿ ಸೇರಿದ್ದಾರೆ. ನಾನು ಕೂಡ ಜೆಡಿಎಸ್‌ನಿಂದ ಶಾಸಕನಾಗಿದ್ದೆ. ಅಲ್ಲಿನ ಉಸಿರು ಕಟ್ಟಿಸುವ ವಾತಾವರಣದಿಂದಾಗಿ ಬಿಜೆಪಿಗೆ ಬಂದೆ ಎಂದರು.

ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಮಾತನಾಡಿ, ಬಿಜೆಪಿಯ ದೇಶಪ್ರೇಮ ಹಾಗೂ ವಿಶ್ವನಾಯಕ ಎನಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ ಆಡಳಿತದಿಂದ ಸ್ಫೂರ್ತಿಗೊಂಡು ಬಿಜೆಪಿ ಸೇರಿದ್ದೇನೆ ಎಂದು ಹೇಳಿದರು.

ರಾಜ್ಯ ಎಸ್‌ಸಿ ಮೋರ್ಚಾ ಖಜಾಂಚಿ ಕೆ. ನಾಗೇಶ್, ತಾಲೂಕು ಅಧ್ಯಕ್ಷ ಸುಂದರೇಶ್ ಸುನಿಲ್, ಪ್ರಧಾನ ಕಾರ್ಯದರ್ಶಿಗಳಾದ ನೀಲೇರಿ ಮಂಜುನಾಥ್, ರವಿಕುಮಾರ್, ಉಪಾಧ್ಯಕ್ಷರಾದ ರಾಮಕೃಷ್ಣ, ಭಗವಾನ್, ಬಯಪ ಮಾಜಿ ಅಧ್ಯಕ್ಷ ಸಿ. ಅಶ್ವತ್ಥನಾರಾಯಣ್, ರೈತ ಮೋರ್ಚ ಜಿಲ್ಲಾಧ್ಯಕ್ಷ ಎಚ್.ಎಂ. ರವಿಕುಮಾರ್, ಮಹಿಳಾ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ನಾಗವೇಣಿ, ತಾಲೂಕು ಉಪಾಧ್ಯಕ್ಷೆ ಆರ್. ಪುನೀತಾ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net