ಬಿಜೆಪಿ ಸೋಲಿಸಿ, ಸಂವಿಧಾನ ಉಳಿಸಿ,

Published on

ಬಳ್ಳಾ: ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ, ಸಂವಿಧಾನ ಉಳಿಸಬೇಕು ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ರಾಜ್ಯ ಜಂಟಿ ಕಾರ್ಯದರ್ಶಿ ಚಂದ್ರಕುಮಾರಿ ಹೇಳಿದರು.
ನಗರದ ಖಾಸಗಿ ಹೊಟೇಲ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಿಜೆಪಿಯನ್ನು ಸೋಲಿಸದಿದ್ದರೆ ಮಹಿಳೆಯರಿಗಿಲ್ಲ ವಿಮೋಚನೆ ಎಂದು ವಾಗ್ದಳಿ ನಡೆಸಿದರು. ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರ ವಹಿಸಿಕೊಂಡ ನಂತರ ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಿವೆ ಎಂದು ಕಳವಳ ವ್ಯಕ್ತಪಡಿಸಿದರು. ಈ ಬಾರಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಾತ್ರ ಮಹಿಳೆಯರಿಗೆ 33% ಮೀಸಲಾತಿ ಜಾರಿ ಮಾಡುವುದಾಗಿ ಹೇಳಿಕೆ ನೀಡಿದೆ, ಇನ್ನೂ ಇಲ್ಲಿಯವರೆಗೆ ಜಾರಿ ಮಾಡಿಲ್ಲ . ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಬಿಡುಗಡೆ ಮಾಡಿಲ್ಲ. ಈಗಾಗಲೇ ರಾಜ್ಯದ ಅನೇಕ ಕಡೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂಬ ಹೇಳಿಕೆ ನೀಡಿದ್ದಾರೆ. ಹೆಣ್ಣಿನ ಬಗ್ಗೆ ಗೌರವವಿಲ್ಲದವರು ಇಂತಹ ಹೇಳಿಕೆ ನೀಡುವರು ಎಂದು ಅಕ್ರೋಶ ಹೊರಹಾಕಿದರು. ಈ ಲೋಕಸಭಾ ಚುನಾವಣೆಯಲ್ಲಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲಿದೆ ಎಂದರು.
ಇದೇ ವೇಳೆ 2014 ರಿಂದ 2024 ರವರಗೆ ಭಾರತದ ಮಹಿಳೆಯರ ಸ್ಥಿತಿಗತಿಗಳು ಎಂಬ ಪುಸ್ತಕ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ವಿನೋದ, ಅನಿತಾ, ತರಂಗಿಣಿ, ರುದ್ರಮ್ಮ, ಮಂಗಮ್ಮ, ಈರಮ್ಮ ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net