ಬಿಜೆಪಿಗರು ದೆಹಲಿಯಲ್ಲಿ ಪ್ರತಿಭಟಿಸಲಿ

1706klb02
Published on

ಕಲಬುರಗಿ: ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲೆ ಹೆಚ್ಚಿನ ತೆರಿಗೆ ವಿಧಿಸುತ್ತಿದೆ. ರಾಜ್ಯ ಬಿಜೆಪಿಗರು ಮೊದಲು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ಸರ್ಕಾರ ತೈಲ ಬೆಲೆ ಹೆಚ್ಚಿಸಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಚ್ಚಾ ತೈಲ ಬೆಲೆ ಕಡಿಮೆ ಇದ್ದರೂ ಸಹ ಕೇಂದ್ರ ಸರ್ಕಾರದವರು ಹೆಚ್ಚು ಬೆಲೆ ನಿಗದಿ ಮಾಡಿದ್ದಾರೆ. ಅಲ್ಲದೆ ತೆರಿಗೆ ಹೆಚ್ಚಿಸಿದ್ದಾರೆ. ಅಕ್ಕಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಅತಿ ಕಡಿಮೆ ತೈಲ ಬೆಲೆ ಇದೆ. ಪ್ರಸ್ತುತ ಹೆಚ್ಚಳ ಮಾಡಿದ್ದರೂ ಸಹ ಅನ್ಯ ರಾಜ್ಯಗಳಿಗಿಂತ ಕಡಿಮೆ ಇದೆ ಎಂದು ಸಮಜಾಯಿಸಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net