ಬೀದರ್: ಬಿಜೆಪಿಯ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಹ ಸಂಚಾಲಕರಾಗಿ ರವೀಂದ್ರ ವಟಗೆ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಕೂಡಲೇ ತಮ್ಮ ಜವಾಬ್ದಾರಿ ವಹಿಸಿಕೊಂಡು ಪಕ್ಷದ ಸಂಘಟನೆ ಬಲವರ್ಧನೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.